ನವದೆಹಲಿ: ದೇಶದಲ್ಲಿ 1,331 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ, ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ರಿಂದ 22,742 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ಮಂಗಳವಾರ ತಿಳಿಸಿದೆ.
0
samarasasudhi
ಮೇ 09, 2023
ನವದೆಹಲಿ: ದೇಶದಲ್ಲಿ 1,331 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ, ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,178 ರಿಂದ 22,742 ಕ್ಕೆ ಇಳಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ಮಂಗಳವಾರ ತಿಳಿಸಿದೆ.
ಈವರೆಗಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4.49 ಕೋಟಿ (4,49,72,800) ಆಗಿದೆ.
ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇಕಡಾ 98.76 ರಷ್ಟಿದ್ದು, ಇದುವರೆಗೆ ರೋಗದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,44,18,351ಕ್ಕೆ ಏರಿಕೆಯಾಗಿದೆ.
ಕೊರೊನಾ ಸೋಂಕಿನಿಂದ ಸಾವಿನ ಪ್ರಮಾಣವು ಶೇ 1.18 ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಾದ್ಯಂತ 220.66 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.