ನವದೆಹಲಿ: ಸುಡಾನ್‌ನಲ್ಲಿ ಸಿಲುಕಿದ್ದ 3,862 ಮಂದಿ ಭಾರತೀಯರನ್ನು ಆಪರೇಷನ್ ಕಾವೇರಿ ಕಾರ್ಯಾಚರಣೆಯಡಿ ಸ್ವದೇಶಕ್ಕೆ ಕರೆತರಲಾಗಿದೆ.
0
samarasasudhi
ಮೇ 05, 2023
ನವದೆಹಲಿ: ಸುಡಾನ್‌ನಲ್ಲಿ ಸಿಲುಕಿದ್ದ 3,862 ಮಂದಿ ಭಾರತೀಯರನ್ನು ಆಪರೇಷನ್ ಕಾವೇರಿ ಕಾರ್ಯಾಚರಣೆಯಡಿ ಸ್ವದೇಶಕ್ಕೆ ಕರೆತರಲಾಗಿದೆ.
'ಆಪರೇಷನ್ ಕಾವೇರಿ' ಅಡಿಯಲ್ಲಿ ಭಾರತೀಯರನ್ನು ಪೋರ್ಟ್ ಸುಡಾನ್ ಮಾರ್ಗವಾಗಿ ಸೌದಿ ಅರೇಬಿಯಾದ ನಗರವಾದ ಜೆದ್ದಾಕ್ಕೆ ಕರೆತರಲಾಗುತ್ತಿತ್ತು. ಬಳಿಕ ಅಲ್ಲಿಂದ ಭಾರತೀಯ ವಾಯುಪಡೆಯ (ಐಎಎಫ್) ವಿಮಾನಗಳು ಹಾಗೂ ಭಾರತೀಯ ನೌಕಾಪಡೆಯ ಹಡಗುಗಳ ಮೂಲಕ ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿತ್ತು.
ಇದೀಗ ಭಾರತೀಯರನ್ನು ಸ್ಥಳಾಂತರಿಸಲು ಜೆದ್ದಾದಲ್ಲಿ ಕಲ್ಪಿಸಲಾಗಿದ್ದ ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಸೌದಿ ಅರೇಬಿಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.