HEALTH TIPS

₹3 ಲಕ್ಷಕ್ಕೆ ನವಜಾತ ಶಿಶು ಮಾರಾಟ ಮಾಡಿದ ತಾಯಿ!

               ತಿರುವನಂತಪುರ: ₹ ಮೂರು ಲಕ್ಷಕ್ಕೆ ತನ್ನ ನವಜಾತ ಶಿಶುವನ್ನು ಮಾರಾಟ ಮಾಡಿದ ಆರೋಪದ ಮೇಲೆ ಕೇರಳ ತಂಪನೂರು ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.

            ಆರೋಪಿ ಮಹಿಳೆ ಕಂಜಿರಂಕುಲಂ ನಿವಾಸಿಯೆಂದು ತಿಳಿದುಬಂದಿದೆ. ಈ ಘಟನೆ ಬಗ್ಗೆ ಏಪ್ರಿಲ್‌ 21ರಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ತಂಪನೂರು ಪೊಲೀಸರಿಗೆ ಮಾಹಿತಿ ಬಂದಿತ್ತು.

ಈ ವಿಚಾರವಾಗಿ ಪೊಲೀಸರು ತನಿಖೆ ಪ್ರಾರಂಭಿಸಿದ್ದರು.

              'ಮಗು ಏಪ್ರಿಲ್‌ ಮೊದಲ ವಾರದಲ್ಲಿ ಜನಿಸಿದ್ದು, ಹುಟ್ಟಿದ ನಾಲ್ಕು ದಿನಕ್ಕೆ ಮಾರಾಟ ಮಾಡಲಾಗಿದೆ. ₹ 3 ಲಕ್ಷಕ್ಕೆ ಮಗು ಮಾರಾಟವಾಗಿದ್ದು, ತಿರುವನಂತಪುರಂದ ದಂಪತಿ ಹಣಕೊಟ್ಟು ಮಗುವನ್ನು ಮಹಿಳೆಯಿಂದ ಪಡೆದಿದ್ದರು. ಈ ಬಗ್ಗೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ಬಂದಿದ್ದು, ಅವರು ನಮಗೆ ಮಾಹಿತಿ ನೀಡಿದ್ದಾರೆ' ಎಂದು ಪೊಲೀಸರು ಹೇಳಿದರು.

                 ಮಗುವಿನ ಸುರಕ್ಷತೆ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries