ಬದಿಯಡ್ಕ: ಸಂಸ್ಕಾರವಂತ ಜೀವನವನ್ನು ರೂಢಿಸಿಕೊಳ್ಳುವಂತಹ ಪರಿಸರದಲ್ಲಿಯೇ ಮಕ್ಕಳನ್ನು ಬೆಳೆಸಬೇಕು. ಕುಟುಂಬ ಜೀವನ, ಹೊಂದಾಣಿಕೆ ಮೊದಲಾದ ವಿಚಾರಗಳ ಕುರಿತು ನಾವು ಗಂಭೀರವಾಗಿ ಚಿಂತನೆ ಮಾಡಬೇಕಾದ ಕಾಲವಿದಾಗಿದೆ. ಈ ನಿಟ್ಟಿನಲ್ಲಿ ಇಂತಹ ಶಿಬಿರಗಳು ವಿದ್ಯಾರ್ಥಿಗಳ ಜೀವನಕ್ಕೆ ಪ್ರಯೋಜನಪ್ರದವಾಗಲಿದೆ ಎಂಬುದು ನಮ್ಮ ಆಶಯವಾಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಮಾತೃತ್ವಂ ಅಧ್ಯಕ್ಷೆ ಈಶ್ವರಿ ಬೇರ್ಕಡವು ಹೇಳಿದರು.
ಸೋಮವಾರ ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದಲ್ಲಿ ಮುಳ್ಳೇರಿಯ ಹವ್ಯಕ ಮಂಡಲದ ವಿದ್ಯಾರ್ಥಿವಾಹಿನಿಯ ನೇತೃತ್ವದಲ್ಲಿ 4 ದಿನಗಳಿಂದ ನಡೆಯುತ್ತಿರುವ ಜೀವನಬೋಧೆ 23 ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಳ್ಳೇರಿಯ ಮಂಡಲ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಸರ್ಪಮಲೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗಾಗಿ ಇನ್ನಷ್ಟು ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
ಶಾಸನ ತಂತ್ರದ ಸಂಘಟನಾ ತಂಡದ ಶ್ರೀಸಂಯೋಜಕ ಡಾ.ವೈ.ವಿ.ಕೃಷ್ಣಮೂರ್ತಿ, ಮಂಡಲ ಕೋಶಾಧ್ಯಕ್ಷ ಹರಿಪ್ರಸಾದ ಪೆರ್ಮುಖ, ಮಂಡಲ ಮಾತೃಪ್ರಧಾನೆ ಗೀತಾ ಮುಳ್ಳೇರಿಯ, ಮಂಡಲ ಉಪಾಧ್ಯಕ್ಷೆ ಕುಸುಮ ಪೆರ್ಮುಖ, ವಿದ್ಯಾರ್ಥಿವಾಹಿನಿ ಪ್ರಧಾನ ಶ್ಯಾಮಪ್ರಸಾದ ಕುಳಮರ್ವ, ಶಾಲಾಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಪಂಜಿತ್ತಡ್ಕ ಮಾತನಾಡಿದರು. ಗುಂಪೆ ವಲಯ ಕಾರ್ಯದರ್ಶಿ ಕೇಶವ ಪ್ರಸಾದ ಎಡೆಕ್ಕಾನ ವಂದಿಸಿದರು. ಶ್ರೇಯಾ ಮಿಂಚಿನಡ್ಕ ನಿರೂಪಿಸಿದರು. 4 ದಿನಗಳ ಶಿಬಿರದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ಪಾಲಕರು, ವಿವಿಧ ವಲಯದ ಸದಸ್ಯರು ಪಾಲ್ಗೊಂಡಿದ್ದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ, ಸಂಘಟಕರಿಗೆ ಸ್ಮರಣಿಕೆ, ಪ್ರಮಾಣಪತ್ರ ವಿತರಿಸಲಾಯಿತು.




.jpg)
