HEALTH TIPS

8 ಲಕ್ಷ ರೂ. ಮೊತ್ತದ 2000 ರೂ. ನೋಟುಗಳನ್ನು ದೇವಸ್ಥಾನದ ಹುಂಡಿಗೆ ಹಾಕಿದ ಭಕ್ತ!

                ಶಿಮ್ಲಾಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಆ ನೋಟುಗಳನ್ನು ಬದಲಿಸಿಕೊಳ್ಳುವ ಪ್ರಕ್ರಿಯೆ ಮಂಗಳವಾರ ಆರಂಭಗೊಂಡಿದೆ.

                   ಆದರೆ, ಈ ಮಧ್ಯೆ ಭಕ್ತಾದಿ ಒಬ್ಬರು ದೇವಸ್ಥಾನದ ಕಾಣಿಕೆ ಹುಂಡಿಗೆ ಬರೋಬ್ಬರಿ 8 ಲಕ್ಷ ರೂಪಾಯಿ ದೇಣಿಗೆ ಹಾಕುವ ಮೂಲಕ ಸುದ್ದಿಯಾಗಿರುವ ಘಟನೆ ಹಿಮಾಚಲಪ್ರದೇಶದ ಕಂಗ್ರಾ ಜಿಲ್ಲೆಯಲ್ಲಿ ನಡೆದಿದೆ.

                                       8 ಲಕ್ಷ ರೂಪಾಯಿ ಕಾಣಿಕೆ

                   ಕಂಗ್ರಾದಲ್ಲಿರುವ ಮಾ ಜ್ವಾಲಾ ದೇವಿ ದೇವಸ್ಥಾನದ ಕಾಣಿಕೆ ಹುಂಡಿಗೆ ವ್ಯಕ್ತಿ ಒಬ್ಬರು 2,000 ಸಾವಿರ ರೂಪಾಯಿ ಮುಖಬೆಲೆಯ ಸುಮಾರು 400 ನೋಟುಗಳನ್ನು ಹಾಕಿದ್ದಾರೆ. ಅಂದರೆ 8 ಲಕ್ಷ ರೂಪಾಯಿ ಹಣವನ್ನು ದೇವಸ್ಥಾನದ ಹುಂಡಿಗೆ ಹಾಕಿದ್ದಾರೆ.

                     ಈ ಕುರಿತು ಪ್ರತಿಕ್ರಿಯಿಸಿರುವ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸುರೇಶ್​ ಕುಮಾರ್​ ದೇವಾಲಯಕ್ಕೆ ಭೇಟಿ ನೀಡುವ ಭಕ್ತರು ಆಗಾಗ್ಗೆ ಇಂತಹ ಕಾಣಿಕೆಗಳನ್ನು ನೀಡುತ್ತಿರುತ್ತಾರೆ. ಹುಂಡಿಯಲ್ಲಿ ದೊರೆಕಿರುವ ಹಣವನ್ನು ಸಂಪೂರ್ಣವಾಗಿ ಭಕ್ತರ ಸೌಲಭ್ಯಕ್ಕೆ ಬಳಸಲಾಗುವುದು ಎಂದು ತಿಳಿಸಿದ್ದಾರೆ.

                  ಈ ಕುರಿತು ಪ್ರತಿಕ್ರಿಯಿಸಿರುವ ಕಂಗ್ರಾ ಜಿಲ್ಲಾ ಡಿಸಿಪಿ ನಿಪುನ್​ ಜಿಂದಾಲ್​ ಈ ಕುರಿತು ತಮ್ಮಗೆ ಯಾವುದೇ ದೂರು ದಾಖಲಾಗಿಲ್ಲ ದೇವಾಲಯದ ಪ್ರದೇಶದ ಸುತ್ತ ಅಳವಡಿಸಿರುವ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries