HEALTH TIPS

ಮಲಪ್ಪುರಂ: ಥಳಿಸಿ ಕೊಂದ ಆರೋಪ; 9 ಮಂದಿ ಬಂಧನ

                 ಲಪ್ಪುರಂ: ಕಳ್ಳನೆಂದು ಶಂಕಿಸಿ ಬಿಹಾರ ಮೂಲದ ವ್ಯಕ್ತಿಯನ್ನು ಥಳಿಸಿ ಕೊಂದ ಆರೋಪಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಭಾನುವಾರ 9 ಮಂದಿಯನ್ನು ಬಂಧಿಸಿದ್ದಾರೆ.

                  'ರಾಜೇಶ್‌ ಮಂಜಿ ಮೃತ ವ್ಯಕ್ತಿ. ಈತ ಶನಿವಾರ ಇಲ್ಲಿನ ಮನೆಯೊಂದರ ಹೆಂಚು ತೆಗೆದು ಒಳನುಗ್ಗಲು ಯತ್ನಿಸಿ ಸಿಕ್ಕಿಬಿದ್ದಿದ್ದ.

             ಬಳಿಕ ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿ ಪ್ಲಾಸ್ಟಿಕ್‌ ಪೈಪ್‌ ಮತ್ತು ಬಡಿಗೆಗಳಿಂದ ಮನಬಂದಂತೆ ಥಳಿಸಿದ್ದರು. ತೀವ್ರ ಗಾಯಗೊಂಡಿದ್ದ ಮಂಜಿ ಮೃತಪಟ್ಟಿದ್ದ' ಎಂದು ಪೊಲೀಸರು ತಿಳಿಸಿದ್ದಾರೆ.


             'ಆರೋಪಿಗಳು ಸಾಕ್ಷ್ಯನಾಶಕ್ಕೆ ಯತ್ನಿಸಿದ್ದರು. ಸಿ.ಸಿ.ಟಿ.ವಿಯಲ್ಲಿ ಸೆರೆಯಾದ ದೃಶ್ಯಗಳನ್ನು ಅಳಿಸಿಹಾಕಲು ಪ್ರಯತ್ನಿಸಿದ್ದರು. ಆದರೆ ಎಲ್ಲ ಸಾಕ್ಷ್ಯಗಳೂ ನಮಗೆ ಲಭ್ಯವಾಗಿವೆ. ಸದ್ಯ 9 ಮಂದಿಯನ್ನು ಬಂಧಿಸಿ, ಸಾಕ್ಷ್ಯನಾಶಕ್ಕೆ ಯತ್ನಿಸಿದ ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ' ಎಂದು ಮಲಪ್ಪುರ ಪೊಲೀಸ್‌ ಮುಖ್ಯಸ್ಥ ಸಜಿತ್‌ ದಾಸ್‌ ತಿಳಿಸಿದ್ದಾರೆ.

                'ಸಂತ್ರಸ್ತ ಕದಿಯುವ ಉದ್ದೇಶದಿಂದ ಈ ಪ್ರದೇಶಕ್ಕೆ ಬಂದಿದ್ದ ಎಂದು ಪ್ರಾಥಮಿಕ ತನಿಖೆ ವೇಳೆ ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ಬಳಿಕ ಕಳೇಬರವನ್ನು ಆತನ ಕುಟುಂಬಸ್ಥರಿಗೆ ಒಪ್ಪಿಸಲಾಗಿದೆ. ಪ್ರಕರಣ ಸಂಬಂಧ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries