ತಿರುವನಂತಪುರಂ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ನಾಳೆ ಚಂಡಮಾರುತವಾಗಿ ರೂಪುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದು ಆರಂಭದಲ್ಲಿ ದಿಕ್ಕನ್ನು ಬದಲಿಸಿ ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯತ್ತ ಚಲಿಸುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕೇರಳದಲ್ಲಿ ನ.12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದ ಅಲ್ಲಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ 12ರವರೆಗೆ ಹಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. 11ರಂದು ವಯನಾಡು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.





