HEALTH TIPS

ಕಾಶ್ಮೀರದಲ್ಲಿ ಪತ್ತೆಯಾಯ್ತು ಚಂದ್ರನಾಕಾರದ ಬಲೂನ್​; ಪಾಕಿಸ್ತಾನದಿಂದ ಬೇಹುಗಾರಿಕೆ ಶಂಕೆ

                ಸಾಂಬಾ:  ಜಮ್ಮು ಮತ್ತು ಕಾಶ್ಮೀರದ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನದ ಶಂಕಿತ ಬಲೂನ್ ಪತ್ತೆಯಾಗಿದೆ. ಕೂಡಲೇ ಭದ್ರತಾ ಅಧಿಕಾರಿಗಳು ಶಂಕಿತ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಈ ಹಿಂದೆ ಚೀನಾದ ಬೇಹುಗಾರಿಕಾ ಬಲೂನ್‌ ಅಮೆರಿಕಾದಲ್ಲಿ ಹಾರಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿ ಹೊಡೆದುರುಳಿಸಲಾಗಿತ್ತು.

                 ಸದ್ಯ, ಪತ್ತೆಯಾಗಿರುವ ಚಂದ್ರನಾಕಾರದ ಬಲೂನ್ ಪಾಕಿಸ್ತಾನದ್ದು ಎಂದು ಶಂಕಿಸಲಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಇದಕ್ಕೂ ಮುನ್ನ ಏಪ್ರಿಲ್ 20ರಂದು ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾರಾ ಗ್ರಾಮದ ದೇವಸ್ಥಾನದ ಬಳಿ ಅಂತಾರಾಷ್ಟ್ರೀಯ ಗಡಿಯಲ್ಲಿ ವಿಮಾನದ ಆಕಾರದಲ್ಲಿ ಬಲೂನ್ ಪತ್ತೆಯಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries