HEALTH TIPS

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮೋಚಾ ಚಂಡಮಾರುತ ಸೃಷ್ಟಿ; ಕೇರಳ, ಕರ್ನಾಟಕ ಸೇರಿ ಹಲವೆಡೆ ವ್ಯಾಪಕ ಮಳೆ: ಹವಾಮಾನ ಇಲಾಖೆ

               ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

             ಮೂರ್ನಾಲ್ಕು ದಿನಗಳಲ್ಲಿ, ಅಂದರೆ ಮೇ 6ರ ಆಸುಪಾಸಿನಲ್ಲಿ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮೋಚಾ ಚಂಡಮಾರುತ (Cyclon in Bay of Bengal) ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ (ಏ 2) ಎಚ್ಚರಿಕೆ ನೀಡಿದ್ದು, ಕೇರಳ, ಕರ್ನಾಟಕದ  ವಿವಿಧ ಭಾಗಗಳಲ್ಲಿ ಮೇ 7ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
             ಅಮೆರಿಕದ ಹವಾಮಾನ ಮುನ್ಸೂಚನೆ ಘಟಕವಾದ ಗ್ಲೋಬಲ್​ ಫೋರ್​ಕಾಸ್ಟ್​ ಸಿಸ್ಟಮ್​ (GFS) ಮತ್ತು ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಗಳ ಯುರೋಪಿಯನ್ ಕೇಂದ್ರ (ECMWF)ದ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ರಚನೆ ಕುರಿತ ವರದಿ ಬೆನ್ನಲ್ಲೇ ಐಎಂಡಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಐಎಂಡಿಯ ಹವಾಮಾನ ಶಾಸ್ತ್ರದ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು, 'ಚಂಡಮಾರುತದ ಪರಿಚಲನೆ ಆರಂಭವಾದ 48 ಗಂಟೆಗಳಲ್ಲಿ ಅದರ ಪ್ರಭಾವದಿಂದಾಗಿ ಅದೇ ಪ್ರದೇಶದಲ್ಲಿ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳಬಹುದು. ಕೆಲವು ಹವಾಮಾನ ಮುನ್ಸೂಚನೆ ಘಟಕಗಳು ಇದು ಸೈಕ್ಲೋನ್ ಎಂದು ಸೂಚಿಸುತ್ತಿವೆ.
              ನಾವು ತೀವ್ರ ನಿಗಾ ಇಡುತ್ತಿದ್ದೇವೆ. ಈ ಬಗ್ಗೆ ನಿಯಮಿತವಾಗಿ ಅಪ್​ಡೇಟ್​ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

              "2023 ರ ಮೇ ಮೊದಲಾರ್ಧದಲ್ಲಿ ಯಾವುದೇ ಉಷ್ಣವಲಯದ ಚಂಡಮಾರುತವು ಬರುವ ಸಾಧ್ಯತೆ ಬಹಳ ಕಡಿಮೆ" ಎಂದು ಖಾಸಗಿ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ವೆದರ್ ಹೇಳಿತ್ತು. ಏಪ್ರಿಲ್ನಲ್ಲಿ ಭಾರತೀಯ ಸಮುದ್ರಗಳಲ್ಲಿ ಯಾವುದೇ ಚಂಡಮಾರುತದ ಬಿರುಗಾಳಿ ಕಂಡುಬಂದಿಲ್ಲ.

                ಸತತ ನಾಲ್ಕು ವರ್ಷಗಳಿಂದ ಏಪ್ರಿಲ್​ ತಿಂಗಳಲ್ಲಿ ಉಷ್ಣವಲಯದ ಚಂಡಮಾರುತ ಸಂಭವಿಸಿಲ್ಲ ಎಂದು ಈ ಹಿಂದೆ ವರದಿ ನೀಡಿತ್ತು. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಕರ್ನಾಟಕದಲ್ಲಿ ಮೇ 7ರ ವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು-ಮಿಂಚು ಸಹಿತ ವ್ಯಾಪಕ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries