HEALTH TIPS

ದೆಹಲಿ: ನಾಗರಿಕ ಸೇವಾ ಪ್ರಾಧಿಕಾರ ರಚಿಸಿ ಕೇಂದ್ರದಿಂದ ಸುಗ್ರೀವಾಜ್ಞೆ: ಎಎಪಿ ಆಕ್ರೋಶ

             ವದೆಹಲಿ: ದೆಹಲಿಯಲ್ಲಿ ಗ್ರೂಪ್-ಎ ಅಧಿಕಾರಿಗಳ ವರ್ಗಾವಣೆ ಮತ್ತು ಶಿಸ್ತು ಪ್ರಕ್ರಿಯೆಗಳ ಉಸ್ತುವಾರಿಗಾಗಿ 'ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ'ವನ್ನು ರಚಿಸಿ ಕೇಂದ್ರ ಸರ್ಕಾರ ಶುಕ್ರವಾರ ರಾತ್ರಿ ಸುಗ್ರೀವಾಜ್ಞೆ ಹೊರಡಿಸಿದೆ.

             ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಸೇವೆಗಳನ್ನು ಹೊರತುಪಡಿಸಿ ದೆಹಲಿಯಲ್ಲಿನ ಸರ್ಕಾರಿ ಸೇವೆಗಳ ನಿಯಂತ್ರಣವನ್ನು ಚುನಾಯಿತ ಸರ್ಕಾರಕ್ಕೆ ವಹಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದ ಬೆನ್ನಿಗೇ ಕೇಂದ್ರ ಸರ್ಕಾರ ಈ ನಡೆ ಅನುಸರಿಸಿದೆ.

ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸಲು ಕೇಂದ್ರವು ಸುಗ್ರೀವಾಜ್ಞೆ ತರಲು ಯೋಜಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರು ಶುಕ್ರವಾರವಷ್ಟೇ ಆರೋಪಿಸಿದ್ದರು.

             'ರಾಷ್ಟ್ರ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರ'ಕ್ಕೆ ದೆಹಲಿಯ ಮುಖ್ಯಮಂತ್ರಿ ಅಧ್ಯಕ್ಷರಾಗಿರಲಿದ್ದಾರೆ. ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ಸುಗ್ರೀವಾಜ್ಞೆಯಲ್ಲಿ ಹೇಳಲಾಗಿದೆ.

             'ಪ್ರಾಧಿಕಾರವು ನಿರ್ಧರಿಸಬೇಕಾದ ಎಲ್ಲಾ ವಿಷಯಗಳನ್ನು ಬಹುಮತದ ಆಧಾರದಲ್ಲೇ ನಿರ್ಧರಿಸಲಾಗುತ್ತದೆ. ಪ್ರಾಧಿಕಾರದ ಎಲ್ಲಾ ಶಿಫಾರಸುಗಳನ್ನು ಸದಸ್ಯ ಕಾರ್ಯದರ್ಶಿ ದೃಢೀಕರಿಸಬೇಕು' ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

             ಪ್ರಾಧಿಕಾರ ರಚನೆ ಮಾಡಿ ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರ್ಕಾರದ ವಿರುದ್ಧ ಎಎಪಿ ಕಿಡಿಕಾರಿದೆ. ಇದೊಂದು ವಂಚಕ ನಡೆ ಎಂದು ಆರೋಪಿಸಿದೆ.

              ಲೋಕೋಪಯೋಗಿ ಇಲಾಖೆ ಸಚಿವೆ ಅತಿಶಿ ಅವರು ಕೇಂದ್ರದ ಸುಗ್ರೀವಾಜ್ಞೆಯು ನ್ಯಾಯಾಂಗ ನಿಂದನೆ ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries