HEALTH TIPS

ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಕ್ಷಮಿಸಲಾರರು: ಅಧೀರ್ ರಂಜನ್‌ ಚೌಧರಿ

                  ವದೆಹಲಿ: ಒಂದು ವೇಳೆ ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಯಾವತ್ತೂ ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕ ಅಧಿರ್ ರಂಜನ್ ಚೌಧರಿ ಹೇಳಿದ್ದಾರೆ.

            ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷಗಳು ಒಂದಾದರೆ ಬಿಜೆಪಿ ಅಧಿಕಾರದಲ್ಲಿ ಇರುವುದಿಲ್ಲ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ.

             ಕರ್ನಾಟಕ ಚುನಾವಣೆ ಬಳಿಕ, ದೇಶದಾದ್ಯಂತ ಒಂದು ಅಲೆ ಪ್ರಾರಂಭವಾಗಿದೆ. ಬಿಜೆಪಿ ಹಾಗೂ ಪ್ರಧಾನಿ ಮೋದಿ ಅವರ ದಿನಗಳು ಮುಗಿಯುತ್ತಿವೆ ಎಂದು ಜನ ಹೇಳಲು ಶುರು ಮಾಡಿದ್ದಾರೆ. ಒಂದು ವೇಳೆ ಈಗ ವಿರೋಧ ಪಕ್ಷಗಳು ಒಂದಾಗದಿದ್ದರೆ ದೇಶದ ಜನ ಎಂದೂ ನಮ್ಮನ್ನು ಕ್ಷಮಿಸಲಾರರು ಎಂದು ಅವರು ಹೇಳಿದರು.

             'ಕರ್ನಾಟಕದ ಕಾಂಗ್ರೆಸ್‌ ಗೆಲುವನ್ನು ಇಡೀ ದೇಶ ಸಂಭ್ರಮಿಸುತ್ತಿದೆ. ರಾಹುಲ್‌ ಗಾಂಧಿ ಅವರ ಭಾರತ್ ಜೋಡೊ ಯಾತ್ರೆಯನ್ನು ಜನ ಪ್ರೀತಿಸಿದ್ದಾರೆ. ಕಾಂಗ್ರೆಸ್‌ ಪಕ್ಷ ಸತ್ಯದ ದ್ಯೋತಕ' ಎಂದು ಅವರು ಬಣ್ಣಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries