ಕೋಲ್ಕತ್ತ (PTI): 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ವಕೀಲರ ಮೂಲಕ ನೋಟಿಸ್ ಕಳುಹಿಸಿದ್ದೇವೆ' ಎಂದು ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಹೇಳಿದ್ದಾರೆ.
0
samarasasudhi
ಮೇ 10, 2023
ಕೋಲ್ಕತ್ತ (PTI): 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ವಕೀಲರ ಮೂಲಕ ನೋಟಿಸ್ ಕಳುಹಿಸಿದ್ದೇವೆ' ಎಂದು ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಹೇಳಿದ್ದಾರೆ.
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಹೆಸರು ಕೆಡಿಸುವ ಉದ್ದೇಶದಿಂದ ಸುಳ್ಳು ಹಾಗೂ ಮಾನಹಾನಿಕರ ಹೇಳಿಕೆ ನೀಡಿರುವ ಮಮತಾಗೆ ನೋಟಿಸ್ ನೀಡಲಾಗಿದೆ ಎಂದು ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.
'ಪತ್ನಿ ಪಲ್ಲವಿ ಜೋಶಿ, ನಿರ್ಮಾಪಕ ಅಭಿಷೇಕ್ ಅಗರವಾಲ್ ಜೊತೆಗೂಡಿ ಅಗ್ನಿಹೋತ್ರಿ ಸಿನಿಮಾ ನಿರ್ಮಾಣ ಮಾಡಿದ್ದರು. ಮಮತಾ ಅವರಿಗೆ ತಾವು ಕಳುಹಿಸಿರುವ ನೋಟಿಸ್‌ನ ಪ್ರತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.