ಲಖನೌ: ಉತ್ತರ ಪ್ರದೇಶ ನ್ಯಾಯಾಲಯವು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್ ಅವರನ್ನು ದ್ವೇಷ ಭಾಷಣ ಪ್ರಕರಣದಿಂದ ಬುಧವಾರ ಖುಲಾಸೆಗೊಳಿಸಿದೆ.
0
samarasasudhi
ಮೇ 24, 2023
ಲಖನೌ: ಉತ್ತರ ಪ್ರದೇಶ ನ್ಯಾಯಾಲಯವು ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಅಜಂ ಖಾನ್ ಅವರನ್ನು ದ್ವೇಷ ಭಾಷಣ ಪ್ರಕರಣದಿಂದ ಬುಧವಾರ ಖುಲಾಸೆಗೊಳಿಸಿದೆ.
2019ರ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಳೆದ ವರ್ಷ (2022ರ) ಅಕ್ಟೋಬರ್‌ನಲ್ಲಿ ಖಾನ್ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
ಇದೀಗ ಸೆಷನ್ಸ್ ನ್ಯಾಯಾಲಯವು, ಖಾನ್ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ರದ್ದು ಮಾಡಿದೆ.
ಸಮಾಜವಾದಿ ಪಕ್ಷದ ಪ್ರಮುಖ ನಾಯಕ ಅಜಂ ಖಾನ್, ರಾಂಪುರ ಸದರ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಬಳಿಕ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಅಕಾಶ್ ಸಕ್ಷೇನಾ ಅವರು ಅಜಂ ಖಾನ್ ಅವರ ಆಪ್ತ ಅಸೀಂ ರಾಜಾ ವಿರುದ್ಧ ಗೆಲುವು ಸಾಧಿಸಿ, ಶಾಸಕರಾಗಿದ್ದಾರೆ.