ಪೆರ್ಲ: ಇಡಿಯಡ್ಕದ ಶಿವಾಂಜಲಿ ಕಲಾ ಕೇಂದ್ರದ 13 ನೇ ವಾರ್ಷಿಕ ಸಮಾರಂಭ ಇಡಿಯಡ್ಕದ ಶ್ರೀ ದುರ್ಗಾಪರಮೇಶ್ವರೀ (ಉಳ್ಳಾಲ್ತಿ) ವಿಷ್ಣುಮೂರ್ತಿ ಕ್ಷೇತ್ರದ ಅನ್ನಪೂರ್ಣ ಸಭಾಂಗಣದಲ್ಲಿ ಜರಗಿತು.
ಎಣ್ಮಕಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜೆ.ಎಸ್.ಸೋಮಶೇಖರ ಅಧ್ಯಕ್ಷತೆ ವಹಿಸಿದ್ದರು. ಮಾಣಿಲ ಶ್ರೀಧಾಮದ ಪರಮಪೂಜ್ಯ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಕರ್ನಾಟಕ ಕಲಾಶ್ರೀ ವಿದುಷಿ ನಯನ ವಿ.ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೋಟೆಕಣಿಯ ಶ್ರೀ ರಾಮನಾಥ ಸಾಂಸ್ಕøತಿಕ ಭವನ ಸಮಿತಿಯ ಪ್ರಧಾನ ಸಂಚಾಲಕ ಗುರುಪ್ರಸಾದ್ ಕೋಟೆಕಣಿ, ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ) ವಿಷ್ಣುಮೂರ್ತಿ ಕ್ಷೇತ್ರದ ಕಾರ್ಯದರ್ಶಿ ಸದಾನಂದ ಶೆಟ್ಟಿ ಕುದ್ವ ಶುಭಾಶಂಸನೆಗೈದರು.
ಶ್ರೀರಾಗ್ ಎಚ್. ಪ್ರಾರ್ಥನೆ ಹಾಡಿದರು. ವಿದುಷಿ ಕಾವ್ಯ ಭಟ್ ಪೆರ್ಲ ಸ್ವಾಗತಿಸಿದರು. ಪುತ್ತೂರು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು ಕಂಪ್ಯೂಟರ್ ಇನ್‍ಸ್ಟ್ರಕ್ಟರ್ ಉಷಾ ರಾಮಕೃಷ್ಣ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಭರತನಾಟ್ಯ ಹಾಗು ಜಾನಪದ ನೃತ್ಯಗಳು ನೃತ್ಯ ಪಲ್ಲವ ಪ್ರದರ್ಶನಗೊಂಡಿತು.


