ಕೊಚ್ಚಿ: ಉದಿನೂರು ಮಹಮ್ಮದ್‍ಕುಞÂ ಅವರು ಕನ್ನಡ ಭಾಷೆಯಲ್ಲಿ ರಚಿಸಿದ 'ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂವೇದನೆ' ಎಂಬ ಕೃತಿಯನ್ನು ವಿಧಾನಪರಿಷತ್ ಸಭಾಪತಿ ಬಸವರಾಜ ಸಿ. ಹೊರಟ್ಟಿ ಬಿಡುಗಡೆ ಮಾಡಿದರು. ಎರ್ನಾಕುಲಂ ಟೌನ್ ಹಾಲ್‍ನಲ್ಲಿ ನಡೆದ 'ಕೊಚ್ಚಿನ್ ಕನ್ನಡ ಸಾಂಸ್ಕøತಿಕ ಉತ್ಸವ 2023' ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿದರು.
ಬೆಳಗಾವಿಯ ಶ್ರೀ ಮಡಿವಾಳ ರಾಜಯೋಗೀಂದ್ರ ಸ್ವಾಮಿಗಳು ಆಶೀರ್ವಚನ ನೀಡಿದರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ, ಕರ್ನಾಟಕ ಸರಕಾರದ ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಸಂಘ ಕೊಚ್ಚಿನ್ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾಗಿತ್ತು
ಕರ್ನಾಟಕ ಸರ್ಕಾರದ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಐ.ಎ.ಎಸ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಆ ಮುಖ ಭಾಷಣ ಮಾಡಿದರು. ಶಾಸಕ ಕೆ.ಬಾಬು, ಪತ್ರಕರ್ತರಾದ ಬದ್ರುದೀನ್ ಕೆ ಮಣಿ (ಪಬ್ಲಿಕ್ ಟಿವಿ), ರಾಧಾಕೃಷ್ಣ ಉಳಿಯತ್ತಡ್ಕ, ಹಂಸ ಮಲಾರ್, ಪರಿಣಿತಾ ರವಿ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಬ್ದುಲ್ ರಹಮಾನ್ ಸುಬ್ಬಯ್ಯಕಟ್ಟೆ, ಕಾಸರಗೋಡು ಕನ್ನಡ ಭವನದ ಸಂಸ್ಥಾಪಕ ವಾಮನ್ ರಾವ್ ಬೇಕಲ್, ಸಂಧ್ಯಾ ರಾಣಿ ಟೀಚರ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.
ಕಾಸರಗೋಡು ಜಿಲ್ಲೆಯ ತೃಕ್ಕರಿಪುರದ ಉದಿನೂರ್ ನಿವಾಸಿಯಾಗಿರುವ ಮಹಮ್ಮದ್‍ಕುಞÂ ಅವರ ಈ ಕೃತಿಯನ್ನು ಕಾಸರಗೋಡು ಸುಬ್ಬಯ್ಯಕಟ್ಟೆಯ ಕೈರಳಿ ಪ್ರಕಾಶನ ಪ್ರಕಟಿಸಿದೆ.





