ಬದಿಯಡ್ಕ: ಅತಿ ಪುರಾತನ ಕ್ಷೇತ್ರವಾದ ಶ್ರೀ ಉದನೇಶ್ವರನ ಜೀರ್ಣೋದ್ಧಾರದ ಮಾತ್ಕಾರ್ಯದ ಈ ಪುಣ್ಯ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ಉದ್ಯಮಿ ಸದಾಶಿವ ಶೆಟ್ಟಿ ಕನ್ಯಾನ ಬುಧವಾರ ಭೇಟಿ ನೀಡಿ ಜೀರ್ಣೋದ್ಧಾರದ ಕಾರ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಸಮಿತಿಯರಲ್ಲಿ ತಿಳಿಸಿದರು. ಶ್ರೀದೇವರ ಪ್ರಸಾದವನ್ನು ಪಡೆದು ಕ್ಷೇತ್ರದ ಬಗ್ಗೆ ಮಾಹಿತಿ ಪಡೆದು ಅತೀವ ಸಂತೋಷ ವ್ಯಕ್ತಪಡಿಸಿದರು.
ಕ್ಷೇತ್ರದ ಆಡಳಿತ ಮೊಕ್ತೇಸರ ಶ್ರೀ ವೆಂಕಟರಮಣ ಭಟ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ರೈ ಪೆರಡಾಲ ಗುತ್ತು, ,ಸೇವಾ ಸಮಿತಿ ಅಧ್ಯಕ್ಷ ಜಯದೇವ ಖಂಡಿಗೆ, ಜೀರ್ಣೋದ್ಧಾರ ಮತ್ತು ಸೇವಾ ಸಮಿತಿ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಮಾಜಿ ಮೊಕ್ತೇಸರ ಚಂದ್ರಹಾಸ ರೈ ಪೆರಡಾಲ ಗುತ್ತು, ಜಿರ್ಣೋದ್ಧಾರ ಸಮಿತಿ ಕೋಶಾಧಿಕಾರಿ ಸೂರ್ಯನಾರಾಯಣ ಬಿ, ವಾರ್ಡ್ ಸದಸ್ಯ ಶ್ಯಾಮ್ ಪ್ರಸಾದ್ ಮಾನ್ಯ, ಪ್ರೊ. ಎ.ಶ್ರೀನಾಥ್ ಕಾಸರಗೋಡು, ರಾಮ ಮುರಿಯುಂಕೂಡ್ಲು, ಈಶ್ವರ ಭಟ್ಟ ಪೆರ್ಮುಖ, ಕ್ಷೇತ್ರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.