ತಿರುವನಂತಪುರಂ: ಮೋಕಾ ಚಂಡಮಾರುತ ಭಾನುವಾರ ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಗೆ ಅಪ್ಪಳಿಸಲಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿನ ಮೋಕಾ ಚಂಡಮಾರುತವು ಮುಂದಿನ ಕೆಲವು ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ರೂಪುತಾಳಲಿದೆ.
ನಂತರ, ಚಂಡಮಾರುತವು ಈಶಾನ್ಯ ದಿಕ್ಕಿನಲ್ಲಿ ಚಲಿಸುತ್ತದೆ ಮತ್ತು ಬಾಂಗ್ಲಾದೇಶ-ಮ್ಯಾನ್ಮಾರ್ ಕರಾವಳಿಯನ್ನು ಮುಟ್ಟುತ್ತದೆ.
ಮೋಕಾ ಚಂಡಮಾರುತವು ಕೇರಳದ ಮೇಲೆ ನೇರವಾಗಿ ಪರಿಣಾಮ ಬೀರುವ ಸಾಧ್ಯತೆಯಿಲ್ಲ, ಆದರೆ ಕೇರಳದಲ್ಲಿ ಭಾರೀ ಮಳೆಯಾಗಬಹುದು. ಶುಕ್ರವಾರ ಮಧ್ಯಾಹ್ನದ ವೇಳೆಗೆ ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಮಳೆ ಆರಂಭವಾಗಲಿದೆ ಎನ್ನಲಾಗಿದೆ. ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಹವಾಮಾನ ಇಲಾಖೆಯ ಎಚ್ಚರಿಕೆಯ ಪ್ರಕಾರ, ಮುಂದಿನ ಒಂದು ಗಂಟೆಯಲ್ಲಿ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳ ಅಲ್ಲಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.
ಇದೇ ವೇಳೆ, ಕೇರಳ, ಕರ್ನಾಟಕ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆಗೆ ಯಾವುದೇ ಅಡ್ಡಿ ಇಲ್ಲ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆದರೆ, ಬಂಗಾಳಕೊಲ್ಲಿ ಮತ್ತು ಅಂಡಮಾನ್ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವವರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೀನುಗಾರರು, ಸಣ್ಣ ಹಡಗುಗಳು, ದೋಣಿಗಳು ಮತ್ತು ಟ್ರಾಲರ್‍ಗಳು ಮೇ 12 ರಿಂದ 14 ರವರೆಗೆ ಮಧ್ಯ ಬಂಗಾಳ ಕೊಲ್ಲಿ ಮತ್ತು ಅಂಡಮಾನ್ ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ.




.webp)
