ಕಾಸರಗೋಡು: ಆದ್ರ್ರಂ ಮಿಷನ್ ಮೂಲಕ ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸುವುದರ ಜತೆಗೆ ಸಾರ್ವಜನಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಕೇರಳದ ಸಾರ್ವಜನಿಕ ಆರೋಗ್ಯ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ನೀಡಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಅವರು ಜಿಲ್ಲೆಯ 25 ಕೇಂದ್ರಗಳು ಸೇರಿದಂತೆ ರಾಜ್ಯದಲ್ಲಿ 5409 ಸಾರ್ವಜನಿಕ ಆರೋಗ್ಯ ಕೇಂದ್ರಗಳ ಉದ್ಘಾಟನೆಯನ್ನು ಆನ್‍ಲೈನ್ ಮೂಲಕ ನೆರವೇರಿಸಿ ಮಾತನಾಡಿದರು. ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಸೇವೆಗಳನ್ನು ಒದಗಿಸಲಗುವುದು. ವೈದ್ಯಕೀಯ ಕಾಲೇಜುಗಳಿಗೆ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಜಾರಿಗೊಳಿಸಲಾಗುತ್ತಿದೆ. ಜನಸಾಮಾನ್ಯರಿಗೂ ಅಂಗಾಂಗ ಕಸಿ ಶಸ್ತ್ರ ಚಿಕಿತ್ಸೆ ಲಭ್ಯವಾಘಿಸುವಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ಆರೋಗ್ಯ ಸೇವೆಗಳಲ್ಲಿ ಸುಧಾರಣೆ ಕಂಡುಬರುವ ರೀತಿಯಲ್ಲಿ ಸಾಮಾಜಿಕ ಜೀವನ ಶೈಲಿ, ಸಾಂಕ್ರಾಮಿಕ ರೋಗಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು. ಕೇರಳದಲ್ಲಿ ಆರೋಗ್ಯ ಕಾರ್ಯಕರ್ತರ ಮೇಲಿನ ದೌರ್ಜನ್ಯ ಸರ್ಕರ ಎಂದಿಗೂ ಸಹಿಸದು. ಆರೋಗ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಆರೋಗ್ಯ ಖಾತೆ ಸಚಿವೆ ವೇಣಾ ಜಾರ್ಜ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ಆರೋಗ್ಯ ಕೇಂದ್ರಗಳಲ್ಲಿ ನಡೆದ ಸಮಾರಂಭದಲ್ಲಿ ಆಯಾ ಕ್ಷೇತ್ರದ ಶಾಸಕರು, ಜನಪ್ರತಿನಿಧೀಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಮಡಿದ್ದರು.




.jpg)
