HEALTH TIPS

ಮಣಿಪುರ: ಶಾಂತಿ ಸ್ಥಾಪನೆಗೆ ಅಮಿತ್ ಶಾ ಮನವಿ

                 ಗುವಾಹಟಿ: ಘರ್ಷಣೆ ಪೀಡಿತ ಮಣಿಪುರ ರಾಜ್ಯದ ಜನರಲ್ಲಿ ಶಾಂತಿ ಕಾಯ್ದುಕೊಳ್ಳುವಂತೆ ಮನವಿ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರು, ಸಮಾಜದ ಎಲ್ಲ ವರ್ಗದ ಜನರಿಗೆ ನ್ಯಾಯ ದೊರಕಿಸಿಕೊಡುವ ಭರವಸೆ ನೀಡಿದರು. ಅಲ್ಲದೆ ಈ ಜನರ ಸಮಸ್ಯೆ ಬಗೆಹರಿಸಲು ಶೀಘ್ರದಲ್ಲಿಯೇ ಮಣಿಪುರಕ್ಕೆ ಭೇಟಿ ನೀಡುವುದಾಗಿ ತಿಳಿಸಿದರು.

                ಅಸ್ಸಾಂನ ಕಾಮರೂಪ ಜಿಲ್ಲೆಯ ಚಂಗ್ಸಾರಿ ಪ್ರದೇಶದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯದ (ಎನ್‌ಎಫ್‌ಎಸ್‌ಯು) 10ನೇ ಕ್ಯಾಂಪಸ್‌ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

               'ನಾನು ಸದ್ಯದಲ್ಲಿಯೇ ಮಣಿಪುರಕ್ಕೆ ಭೇಟಿ ನೀಡಲಿದ್ದು ಅಲ್ಲಿ ಮೂರು ದಿನಗಳು ತಂಗಲಿದ್ದೇನೆ. ಆದರೆ ಅದಕ್ಕೂ ಮುನ್ನ ಎರಡೂ ಗುಂಪಿನವರು ಪರಸ್ಪರರ ನಡುವೆ ಇರುವ ಅಪನಂಬಿಕೆ ಮತ್ತು ಅನುಮಾನಗಳಿಂದ ಹೊರಬರಬೇಕು. ಆ ಮೂಲಕ ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಯ ಭರವಸೆ ಮೂಡಿಸಬೇಕು' ಎಂದು ಅಮಿತ್ ಶಾ ಹೇಳಿದರು.

                 'ರಾಜ್ಯದಲ್ಲಿ ಘರ್ಷಣೆಯಿಂದ ನೊಂದಿರುವವರಿಗೆ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಆದರೆ ಜನರು ಶಾಂತಿ ಸ್ಥಾಪನೆಗಾಗಿ ಪರಸ್ಪರ ಮಾತುಕತೆ ನಡೆಸಬೇಕು' ಎಂದು ಹೇಳಿದರು.

ಇತ್ತೀಚಿನ ಘರ್ಷಣೆಗಳನ್ನು ಹೊರತುಪಡಿಸಿದರೆ ಮಣಿಪುರದಲ್ಲಿ ಆರು ವರ್ಷಗಳಿಂದ ಯಾವುದೇ ರೀತಿಯ ಬಂದ್ ಅಥವಾ ದಿಗ್ಭಂಧನಗಳು ಇರಲಿಲ್ಲ. ಈ ಹಿಂದಿನ ಪರಿಸ್ಥಿತಿ ಮರಳಲು ಜನರು ಬದ್ಧತೆ ತೋರಬೇಕು. ಚರ್ಚೆಯ ಮೂಲಕವೇ ಶಾಂತಿಯ ಮರುಸ್ಥಾಪನೆ ಸಾಧ್ಯ ಎಂದು ಅವರು ತಿಳಿಸಿದರು.

ವಿಧಿ ವಿಜ್ಞಾನ ತಜ್ಞರ ಸ್ಥಳ ಭೇಟಿ ಕಡ್ಡಾಯ?: ಎನ್‌ಎಫ್‌ಎಸ್‌ಯು ನೂತನ ಕ್ಯಾಂಪಸ್‌ನಲ್ಲಿ ಅಧ್ಯಯನ ಮಾಡುವವರಿಗೆ ಶೇ 100ರಷ್ಟು ಉದ್ಯೋಗಾವಕಾಶಗಳು ದೊರೆಯುತ್ತವೆ ಎಂದ ಗೃಹ ಸಚಿವ ಅಮಿತ್‌ ಶಾ, ಆರು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಗುರಿಯಾಗುವ ಅಪರಾಧ ಪ್ರಕರಣಗಳಲ್ಲಿ ವಿಧಿ ವಿಜ್ಞಾನ ತಜ್ಞರು ಸ್ಥಳಕ್ಕೆ ಭೇಟಿ ನೀಡುವುದನ್ನು ಕಡ್ಡಾಯಗೊಳಿಸಲು ಕಾನೂನಿನಲ್ಲಿ ಬದಲಾವಣೆಗಳನ್ನು ತರಲು ಕೇಂದ್ರ ಸರ್ಕಾರ ಯೋಜಿಸುತ್ತಿದೆ ಎಂದರು.

             ಪ್ರಧಾನಿ ನರೇಂದ್ರ ಮೋದಿ ಅವರು ಐಪಿಸಿ, ಸಿಆರ್‌ಪಿಸಿ ಮತ್ತು ಸಾಕ್ಷ್ಯ ಕಾಯ್ದೆಗಳಲ್ಲಿ ಬದಲಾವಣೆಗಳನ್ನು ತರಲು ಯೋಜಿಸಿದ್ದಾರೆ ಎಂದೂ ಅವರು ತಿಳಿಸಿದರು.

                  'ಆರೋಪಿಗಳ ಮೇಲೆ ಥರ್ಡ್‌ ಡಿಗ್ರಿ ಕ್ರಮಗಳನ್ನು ಪ್ರಯೋಗಿಸುವ ಕಾಲ ಇದಲ್ಲ. ಇದಕ್ಕೆ ಬದಲಾಗಿ ಮನೋವಿಜ್ಞಾನ, ಬೆರಳಚ್ಚು ಹಾಗೂ ಡಿಎನ್‌ಎ ಮೂಲಕ ಪುರಾವೆಗಳನ್ನು ಸಂಗ್ರಹಿಸುವ ವೈಜ್ಞಾನಿಕ ವಿಧಾನಗಳಿವೆ. ಇವುಗಳಿಗೆ ಹೆಚ್ಚಿನ ಸಂಖ್ಯೆಯ ತಜ್ಞರ ಅಗತ್ಯವಿದೆ' ಎಂದು ತಿಳಿಸಿದರು.

'ದೇಶದಲ್ಲಿ ಶಿಕ್ಷೆಯ ಪ್ರಮಾಣ ಶೇ 50ರಷ್ಟು ಮಾತ್ರವಿದೆ. ಸಾಕ್ಷ್ಯಾಧಾರಗಳ ಕೊರತೆ ಅಥವಾ ಸಾಕ್ಷಿಗಳು ಪ್ರತಿಕೂಲವಾಗಿ ವರ್ತಿಸುವುದರಿಂದ ಪೊಲೀಸರಿಗೆ ದೋಷಾರೋಪ ಪಟ್ಟಿ ಸಲ್ಲಿಸುವಲ್ಲಿ ಅಡೆತಡೆಗಳು ಎದುರಾಗುತ್ತಿವೆ' ಎಂದು ಅವರು ಬೇಸರ ವ್ಯಕ್ತಪಡಿಸಿದರು.

                     'ಇದನ್ನು ಮನಗಂಡು ಕೇಂದ್ರ ಸರ್ಕಾರ ವಿಧಿ ವಿಜ್ಞಾನ ಕ್ಷೇತ್ರಕ್ಕೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು, ಪ್ರಯೋಗಾಲಯಗಳನ್ನು ನವೀಕರಿಸಲು ಮತ್ತು ಆಧುನೀಕರಿಸಲು, ಪ್ರಾದೇಶಿಕ ಮಟ್ಟದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲು ಮತ್ತು ಜಿಲ್ಲಾ ಮಟ್ಟದ ಮೊಬೈಲ್ ವಿಧಿವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದೆ' ಎಂದು ತಿಳಿಸಿದರು.

                                    ಮನವಿ:

      ಸನ್ಮನಸ್ಸಿನ ಓದುಗರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮಸರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ. 

    ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:

      ಗೂಗಲ್ ಪೇ: 7907952070

   ಬ್ಯಾಂಕ್ ವಿವರ: 

    ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.

 CANARA BANK
BADIYADKA BRANCH
A/c NUMBER: 0611101029775
IFSC: CNRB0004489

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries