HEALTH TIPS

ಎನ್‌ಐಎ ತನಿಖೆ: ಪಶ್ಚಿಮ ಬಂಗಾಳ ಸರ್ಕಾರದ ಅರ್ಜಿ ವಜಾ

                ವದೆಹಲಿ: ಪಶ್ಚಿಮ ಬಂಗಾಳದಲ್ಲಿ ರಾಮನವಮಿ ಆಚರಣೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ನಡೆಸುತ್ತಿರುವ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

           ಕೋಲ್ಕತ್ತ ಹೈಕೋರ್ಟ್‌ ಆದೇಶದ ಅನ್ವಯ ಹಿಂಸಾಚಾರದ ಬಗ್ಗೆ ಎನ್‌ಐಎ ತನಿಖೆ ನಡೆಸುತ್ತಿದೆ.

ಇದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

             ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎ. ನರಸಿಂಹ ಹಾಗೂ ಕೆ.ವಿ. ವಿಶ್ವನಾಥನ್‌ ಅವರಿದ್ದ ತ್ರಿಸದಸ್ಯ ಪೀಠವು, 'ಹೈಕೋರ್ಟ್‌ ಆದೇಶಕ್ಕೆ ತಡೆ ನೀಡುವುದಿಲ್ಲ. ಬೇಸಿಗೆ ರಜೆ ಮುಗಿದ ಬಳಿಕ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಾಗುವುದು' ಎಂದು ಎನ್‌ಐಎ ಪರ ಹಾಜರಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾಗೆ ತಿಳಿಸಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries