HEALTH TIPS

ಕೇರಳದಲ್ಲಿ ಮನೆಗೆಲಸಗಾರರ ಹಕ್ಕುಗಳ ರಕ್ಷಣೆಗೆ ಶೀಘ್ರವೇ ಮಸೂದೆ: ಪಿಣರಾಯಿ ವಿಜಯನ್

                 ತಿರುವನಂತಪುರಂ: ಮನೆಗೆಲಸಗಾರರ ಹಕ್ಕುಗಳ ರಕ್ಷಣೆಗಾಗಿ ಕೇರಳವು ಮಸೂದೆಯೊಂದನ್ನು ತರಲಿದೆ; ರಾಜ್ಯವೊಂದು ಇಂಥ ಮಸೂದೆಯನ್ನು ತರುವುದು ದೇಶದಲ್ಲೇ ಮೊದಲ ಬಾರಿಯಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

                ಕೇರಳ ಮತ್ತು ಅಂತರ್ರಾಷ್ಟ್ರೀಯ ಕಾರ್ಮಿಕ ಸಂಘಟನೆ (ILO)ಯ ನಡುವಿನ ಸಹಕಾರದ 100ನೇ ವಾರ್ಷಿದ ದಿನದ ಅಂಗವಾಗಿ ರಾಜ್ಯದ ಕಾರ್ಮಿಕ ಇಲಾಖೆ ಮತ್ತು ರಾಜ್ಯ ಯೋಜನಾ ಆಯೋಗ ಬುಧವಾರ ಇಲ್ಲಿ ಏರ್ಪಡಿಸಿದ ಅಂತರ್ರಾಷ್ಟ್ರೀಯ ಕಾರ್ಮಿಕ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

                 1957ರಲ್ಲಿ ರಾಜ್ಯದಲ್ಲಿ ಮೊದಲ ಸರಕಾರ ಅಸ್ತಿತ್ವಕ್ಕೆ ಬಂದಂದಿನಿಂದ, ಔಪಚಾರಿಕ ಮತ್ತು ಅನೌಪಚಾರಿಕ ಕ್ಷೇತ್ರಗಳಲ್ಲಿರುವ ಕಾರ್ಮಿಕರ ಅಗತ್ಯಗಳನ್ನು ಈಡೇರಿಸುವುದಕ್ಕಾಗಿ ಹಕ್ಕು-ಆಧಾರಿತ ನೀತಿಯೊಂದನ್ನು ಜಾರಿಗೊಳಿಸಲಾಗಿತ್ತು ಎಂದು ಅವರು ತಿಳಿಸಿದರು.

                ''ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿ ದಕ್ಷಿಣ ಗೋಳಾರ್ಧದಲ್ಲಿ ಅತ್ಯುತ್ತಮ ದಾಖಲೆಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕೇರಳವೂ ಒಂದು. ಜಗತ್ತಿನಾದ್ಯಂತ ಕಾರ್ಮಿಕರ ಹಕ್ಕುಗಳು ಕ್ಷೀಣಿಸುತ್ತಿರುವ ಸಮಯದಲ್ಲಿ ಕಾರ್ಮಿಕರ ಹಕ್ಕುಗಳ ರಕ್ಷಣೆ ಮತ್ತು ಸುಧಾರಣೆಯಲ್ಲಿ ರಾಜ್ಯವು ಅತ್ಯುತ್ತಮ ನಿರ್ವಹಣೆ ನೀಡಿದೆ. ಉತ್ತಮ ಉದ್ಯೋಗವನ್ನು ನೀಡುವಲ್ಲಿ; ಯೂನಿಯನ್ ಗಳು, ಕಾರ್ಮಿಕರ ಸಹಕಾರ ಸಂಘಗಳು ಮತ್ತು ಪಿಂಚಣಿ ಯೋಜನೆಗಳನ್ನು ರೂಪಿಸುವಲ್ಲಿ; ಹಾಗೂ ಸರ್ವರನ್ನು ಒಳಗೊಳ್ಳುವಲ್ಲಿ ಮತ್ತು ವಲಸಿಗ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವಲ್ಲಿ ಕೇರಳವು ಮಾದರಿಯಾಗಿ ಹೊರಹೊಮ್ಮಿದೆ.

                  ವಿವಾದಗಳನ್ನು ಪರಿಹರಿಸಲು ಸರಕಾರ, ಉದ್ಯೋಗದಾತರು ಮತ್ತು ಉದ್ಯೋಗಿಗಳು ಸಭೆ ನಡೆಸುವ ತ್ರಿಪಕ್ಷೀಯ ವ್ಯವಸ್ಥೆ ಸೇರಿದಂತೆ ಐಎಲ್‌ಒದ ಪ್ರಮುಖ ನೀತಿಗಳನ್ನು ನಾವು ಅನುಸರಿಸುತ್ತಿದ್ದೇವೆ'' ಎಂದು ಕೇರಳ ಮುಖ್ಯಮಂತ್ರಿ ಹೇಳಿದರು.

                         ಮನವಿ:

      ಸನ್ಮನಸ್ಸಿನ ಓದುವರೇ, ಸಮರಸ ಸುದ್ದಿ ದಿನನಿತ್ಯ ಓದುಗರಿಗೆ ಬಹುತೇಕ ಸಕಾಲಿಕ ಮತ್ತು ಖಚಿತ ವರದಿಗಳಿಂದ ಇಂದಿನ ಆಧುನಿಕ ಸುದ್ದಿ ಮಾಧ್ಯಮ ಕ್ಷೇತ್ರದಲ್ಲಿ ಹೆಮ್ಮೆಯಿಂದ ಪ್ರಕಟಗೊಳ್ಳುತ್ತಿದೆ. ಪ್ರಸ್ತುತ ಸಮರಸ ಸುದ್ದಿಯ ಸಮಗ್ರ ತಾಂತ್ರಿಕ ನವೀಕರಣಕ್ಕಾಗಿ ಆರ್ಥಿಕ ಅಡಚಣೆಯಿಂದ ಸಹೃದಯ ಓದುಗರು, ಅಭಿಮಾನಿಗಳು ಕನಿಷ್ಠ 100/- ವಿನಂತಾದರೂ ಹೆಗಲು ನೀಡಿದರೆ ಸಹಕಾರಿಯಾಗುವುದೆಂದು ನಂಬಿದ್ದೇವೆ. ಮೇ.29 ಸೋಮವಾರ ಸಂಜೆ 5ರ ಮೊದಲು ಈ ಸಹಾಯ ನಿಮ್ಮಿಂದ ಲಭ್ಯವಾದಲ್ಲಿ ನಾವು ಅಭಾರಿ. 

    ಸಲ್ಲಿಕೆಯಾಗಬೇಕಾದ ಖಾತೆ ಮಾಹಿತಿ:

      ಗೂಗಲ್ ಪೇ: 7907952070

   ಬ್ಯಾಂಕ್ ವಿವರ: 

    ಸಲ್ಲಿಕೆಯ ನಂತರ ನಮಗೆ(ಮೇಲಿನ ಮೊಬೈಲ್ ಸಂಖ್ಯೆಗೆ) ಮಾಹಿತಿ ನೀಡಿ.

 CANARA BANK
BADIYADKA BRANCH
A/c NUMBER: 0611101029775
IFSC: CNRB0004489

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries