HEALTH TIPS

ದಕ್ಷಿಣದಲ್ಲಿನ ಬಿಜೆಪಿ ವಿರೋಧಿ ಅಲೆ ದೇಶದಾದ್ಯಂತ ವ್ಯಾಪಿಸಲಿ: ಸ್ಟಾಲಿನ್

             ಬೆಂಗಳೂರು: ಕರ್ನಾಟಕದ ನೂತನ ಮಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ.

             ಇದು ಬಿಜೆಪಿ ವಿರೋಧಿ ಪಕ್ಷಗಳ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು. ಕಾಂಗ್ರೆಸ್ ಪಕ್ಷದ ಆಹ್ವಾನದ ಮೇರೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸಹ ಸಮಾರಂಭದಲ್ಲಿ ಭಾಗವಹಿಸಿದ್ದರು.


              ಬಳಿಕ ಈ ಕುರಿತು ಟ್ವೀಟ್ ಮಾಡಿರುವ ಸ್ಟಾಲಿನ್, ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಜಾತ್ಯತೀತ ಜೋಡಿಯು ಸಮರ್ಥ ಆಡಳಿತದಿಂದ ಕರ್ನಾಟಕವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ನಾನು ಪ್ರಮಾಣಿಕವಾಗಿ ನಂಬುತ್ತೇನೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಭಾರತದಲ್ಲಿ ಎದ್ದಿರುವ ಈ ಅಲೆಯು ಭಾರತದ ಇತರೆ ಭಾಗಗಳಿಗೂ ಪಸರಿಸಬೇಕು. ಇಂದು ಬೆಂಗಳೂರಿನಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮವು ಇದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು


https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries