ಲಖನೌ: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿ ಮಥುರಾ ನ್ಯಾಯಾಲಯದ ಮುಂದಿರುವ ಎಲ್ಲ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ.
ಲಖನೌ: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿ ಮಥುರಾ ನ್ಯಾಯಾಲಯದ ಮುಂದಿರುವ ಎಲ್ಲ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಮಹತ್ವದ ಆದೇಶ ನೀಡಿದೆ.
ನ್ಯಾಯಮೂರ್ತಿ ಅರವಿಂದ್ ಕುಮಾರ್ ಮಿಶ್ರಾ ಅವರು ಈ ಆದೇಶ ನೀಡಿದ್ದಾರೆ.
'ಇದು ಹಿಂದೂಗಳು ಹಾಗೂ ಮುಸ್ಲಿಮರ ನಂಬಿಕೆ ವಿಷಯವಾಗಿದೆ. ಆದ್ದರಿಂದ ಕೆಳಹಂತದ ನ್ಯಾಯಾಲಯದಲ್ಲಿಯೇ ಈ ಅರ್ಜಿಗಳ ವಿಚಾರಣೆ ಮುಂದುವರೆದರೆ ಪ್ರಕರಣದ ಇತ್ಯರ್ಥ ತಡವಾಗಬಹುದು' ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ಹೇಳಿದೆ.
ವಿವಾದಕ್ಕೆ ಸಂಬಂಧಿಸಿದ ಎಲ್ಲ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸುವಂತೆ ಮಥುರಾದ ಜಿಲ್ಲಾ ನ್ಯಾಯಾಧೀಶರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮಥುರಾ ನ್ಯಾಯಾಲಯದಲ್ಲಿ ಒಟ್ಟು ಏಳು ಅರ್ಜಿಗಳು ವಿಚಾರಣಾ ಹಂತದಲ್ಲಿವೆ.