ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.
0
samarasasudhi
ಜೂನ್ 01, 2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.
'ಟೈಮ್ಸ್ ನೆಟ್‌ವರ್ಕ್ ಇಂಡಿಯಾ ಎಕಾನಾಮಿಕ್ಸ್' ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ನಿತಿನ್ ಗಡ್ಕರಿ, 'ಕಳೆದ ಒಂಭತ್ತು ವರ್ಷದಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಅಭಿವೃದ್ದಿ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ನಿರ್ವಹಿಸಿದೆ.
'ಹಸಿವು, ಬಡತನ ಮತ್ತು ನಿರೋದ್ಯೋಗ ದೇಶದ ಪ್ರಮುಖ ಸಮಸ್ಯೆಗಳಾಗಿವೆ. ಬಡತನ ನಿರ್ಮೂಲನೆಗಾಗಿ ಉದ್ಯೋಗ ಸೃಷ್ಟಿಸುವ ಅಗತ್ಯವಿದೆ. ಆ ಮೂಲಕ ಪ್ರಧಾನಿಯವರ ಐದು ಟ್ರಿಲಿಯನ್ ಆರ್ಥಿಕ ಗುರಿಯನ್ನು ಸಾಧಿಸಬೇಕಿದೆ' ಎಂದು ಹೇಳಿದರು.
2019ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 543 ಸ್ಥಾನಗಳಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದು ಭರ್ಜರಿ ಬಹುಮತದಿಂದ ವಿಜಯ ಸಾಧಿಸಿತ್ತು. ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆಯಲು ಸಫಲವಾಗಿತ್ತು.