HEALTH TIPS

ಜೂ. 24ಕ್ಕೆ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಗೃಹ ಸಚಿವ ಅಮಿತ್‌ ಶಾ

           ವದೆಹಲಿ: ಮಣಿಪುರ ಹಿಂಸಾಚಾರ ಸಂಬಂಧ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಜೂನ್‌ 24 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದೆ.

            'ಹಿಂಸಾಚಾರ ಪೀಡಿತ ಮಣಿಪುರದ ಸ್ಥಿತಿಗತಿಯ ಬಗ್ಗೆ ಚರ್ಚಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಮಿತ್ ಶಾ ಅವರು ಸರ್ವ ಪಕ್ಷಗಳಸ ಸಭೆ ಕರೆದಿದ್ದಾರೆ' ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

               ಮಣಿಪುರದಲ್ಲಿ ಮೈತೇಯು ಹಾಗೂ ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ನಡೆಯುತ್ತಿದೆ. ಹಿಂಸಾಚಾರದಲ್ಲಿ ಈವರೆಗೆ 115 ಮಂದಿ ಸಾವಿಗೀಡಾಗಿದ್ದು, ಕನಿಷ್ಠ 40,000 ಮಂದಿ ನಿರಾಶ್ರಿತರಾಗಿದ್ದಾರೆ.

              ಪರಿಸ್ಥಿತಿ ಅವಲೋಕನ ಮಾಡಲು ಅಮಿತ್‌ ಶಾ ಅವರು ಕಳೆದ ತಿಂಗಳು ಮಣಿಪುರಕ್ಕೆ ಭೇಟಿ ನೀಡಿದ್ದರು. ಉಭಯ ಸಮಯದಾಯಗಳ ನಾಯಕರ ಜತೆ ಸರಣಿ ಸಭೆಗಳನ್ನು ನಡೆಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries