ಬದಿಯಡ್ಕ: ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿ ಕಾಸರಗೋಡು ತಾಲೂಕು ಸಮಿತಿ ನೇತೃತ್ವದಲ್ಲಿ ಜೂ.25 ರಂದು ಎಡನೀರು ಶ್ರೀ ಮಠದಲ್ಲಿ ಕ್ಷೇತ್ರ ಸಮನ್ವಯ ಸಮ್ಮೇಳನ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಲಿದೆ.
ಬೆಳಗ್ಗೆ 10 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಐ.ಕೆ.ರಾಮದಾಸ್ ಮಾಳುನ್ನವರ್ ಅಧ್ಯಕ್ಷತೆ ವಹಿಸುವರು. ಶ್ರೀ ಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರ್, ಮಾತೃ ಸಮಿತಿ ರಾಜ್ಯ ಅಧ್ಯಕ್ಷೆ ಕುಸುಮ ಟೀಚರ್ ಉಪಸ್ಥಿತರಿರುವರು. ಕೇರಳ ಕ್ಷೇತ್ರ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ನಾರಾಯಣನ್ ಮುಖ್ಯ ಭಾಷಣ ಮಾಡುವರು.

