HEALTH TIPS

ಮಾಜಿ ಸಂಸದ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲು ನಿರ್ಧಾರ

                 ನವದೆಹಲಿ: ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ ಭಾರತ ರಾಷ್ಟ್ರ ಸಮಿತಿ(ಬಿಆರ್ ಎಸ್)ನ 35 ನಾಯಕರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ ಮತ್ತು ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

               ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್ ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಈ ಹಿಂದೆ ಖಮ್ಮಂನ ಬಿಆರ್‌ಎಸ್ ಸಂಸದರಾಗಿದ್ದರು.

                  ಈ ವರ್ಷಾಂತ್ಯದಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ.

                  ಬಿಆರ್ ಎಸ್ ನಾಯಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.



    Post a Comment

    0 Comments
    * Please Don't Spam Here. All the Comments are Reviewed by Admin.

    Top Post Ad

    Click to join Samarasasudhi Official Whatsapp Group

    Qries

    Qries

    Below Post Ad


    ಜಾಹಿರಾತು














    https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
    Qries