ಕುಂಬಳೆ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 9ನೇ ವಾರ್ಷಿಕೋತ್ಸವದ ಭಾಗವಾಗಿ ಬಿಜೆಪಿ ಮಂಜೇಶ್ವರ ವಿಧಾನಸಭಾ ಮಂಡಲದ ಸಂಯುಕ್ತ ಮೋರ್ಚಾ ಸಮಾವೇಶ ಕುಂಬಳೆ ಮಾಧವ ಪೈ ಸಭಾಭವನದಲ್ಲಿ ನಡೆಯಿತು.
ಕುಂಬಳೆ ಮಂಡಲ ಉಪಾಧ್ಯಕ್ಷ ನಾರಾಯಣ ನಾಯ್ಕ್ ಅಡ್ಕಸ್ಥಳ ಅಧ್ಯಕ್ಷತೆ ವಹಿಸಿದ ಕಾರ್ಯಕ್ರಮವನ್ನು ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಮನುಲಾಲ್ ಮೇಲೋತ್ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಿತಿ ಸದಸ್ಯೆ ಅಶ್ವಿನಿ ಎಂ.ಎಲ್, ಜಿಲ್ಲಾ ಕಾರ್ಯದರ್ಶಿ ಪುಷ್ಪ ಅಮೆಕ್ಕಳ, ಮಂಡಲ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್ ಮಯ್ಯ, ವಿವಿಧ ಮೋರ್ಚಾಗಳ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಭಾಗವಹಿಸಿದರು.
ಓಬಿಸಿ ಮೋರ್ಚಾ ಕುಂಬಳೆ ಮಂಡಲ ಅಧ್ಯಕ್ಷ ಮಹೇಶ್ ಪುಣಿಯೂರು ಸ್ವಾಗತಿಸಿ, ಬಿಜೆಪಿ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಮಣಿಯಂಪಾರೆ ವಂದಿಸಿದರು.





