ಪೆರ್ಲ: ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದೊಂದಿಗೆ ವಿದ್ಯಾರ್ಥಿಗಳಿಗಾಘಿ ಸಸಿಗಳ ವಿತರಣೆ, ಸಸ್ಯಗಳ ಗುರುತಿಸುವ ಕಾರ್ಯಕ್ರಮ ಆಯೋಜಿಸಲಾಯಿತು. ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಬಿ ಅವರು ಶಾಲಾ ವಠಾರದಲ್ಲಿ ಸಸಿ ನೆಡುವ ಮೂಲಕ ವಿಶ್ವಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
ಈ ಸಂದರ್ಭ ವಿದ್ಯಾರ್ಥಿಗಳಿಗಗಿ ಶಾಲಾ ಪರಿಸರದಲ್ಲಿರುವ ವಿವಿಧ ತರದ ಗಿಡ ಮರಗಳನ್ನು ಗುರುತಿಸುವ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಗಿಡಗಳನ್ನು ಬಹುಮಾನವಾಗಿ ನೀಡಲಾಯಿತು. ಮುಖ್ಯ ಶಿಕ್ಷಕ ರಾಜೇಂದ್ರ ಬಿ ಅವರು ವಿಶ್ವ ಪರಿಸರ ದಿನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಪ್ರಾಥಮಿಕ ಶಾಲಾ ªಮುಖ್ಯ ಶಿಕ್ಷಕ ಗೋಪಾಲಕೃಷ್ಣ ಭಟ್ ಕೋಟೆ, ಪ್ರೌಢಶಾಲಾ ಹಿರಿಯ ಅಧ್ಯಾಪಕ ಕೇಶವ ಪ್ರಕಾಶ್ ಎನ್, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ನೇಚರ್‍ಕ್ಲಬ್‍ನ ಶೀಕ್ಷಕ ಉಮೇಶ್ ಕೆ. ಪೆರ್ಲ ಉಪಸ್ಥಿತರಿದ್ದರು.





