ಕಾಸರಗೋಡು: ತಾಳಿಪಡ್ಪಿನ ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ್ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು, ಡಾ.ಪಿ.ದಯಾನಂದ ಪೈ ಮತ್ತು ಸತೀಶ ಪೈ ಚಾರಿಟೇಬಲ್ ಟ್ರಸ್ಟ್. ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಜೂನ್ 18 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಭÀಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ್‍ನಲ್ಲಿ ಉಚಿತ ನೇತ್ರ ತಪಾಸಣೆ ಹಾಗು ಚಿಕಿತ್ಸಾ ಶಿಬಿರ ನಡೆಯಿತು. ಶಿಬಿರವನ್ನು ಭಗವಾನ್ ಶ್ರೀ ಸತ್ಯಸಾಯಿ ಅಭಯನಿಕೇತನ್‍ನ ಅಧ್ಯಕ್ಷ ಡಾ.ಎಸ್.ಬಿ.ಖಂಡಿಗೆ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. 200 ಕ್ಕೂ ಅಧಿಕ ಮಂದಿ ಶಿಬಿರದ ಪ್ರಯೋಜನ ಪಡೆದರು.
ಆಯ್ದ ಅರ್ಹರಿಗೆ ಜುಲೈ 16 ರಂದು ಮಧ್ಯಾಹ್ನ 3 ಗಂಟೆಗೆ ಅಭಯನಿಕೇತನದಲ್ಲಿ ಕನ್ನಡಕಗಳನ್ನು ವಿತರಿಸಲಾಗುವುದು. ಅಗತ್ಯವುಳ್ಳವರಿಗೆ ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಕೊಡಲಾಗುವುದು.





