HEALTH TIPS

ಪರಿಹಾರ ಶಿಬಿರಗಳಿಗೆ ತೆರಳುವ ವೇಳೆ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿದ ಮಣಿಪುರ ಪೊಲೀಸ್

              ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ತೆರಳಿರುವ ರಾಹುಲ್ ಗಾಂಧಿ ಅವರನ್ನು ಬಿಷ್ಣುಪುರದಲ್ಲಿ ಪೊಲೀಸರು ತಡೆ ಹಿಡಿದಿದ್ದಾರೆ.

                  ಇಂಫಾಲಕ್ಕೆ ಬಂದಿಳಿದ ರಾಹುಲ್ ಗಾಂಧಿ, ಚುರಚಂದಪುರದ ಪರಿಹಾರ ಶಿಬಿರಗಳಲ್ಲಿ ಸಂತ್ರಸ್ತರನ್ನು ಭೇಟಿ ಮಾಡುವ ಯೋಜನೆ ಹೊಂದಿದ್ದರು. ಇಂಫಾಲದಿಂದ ಸುಮಾರು 20 ಕಿ.ಮೀ.

ದೂರದಲ್ಲಿ ರಾಹುಲ್ ಅವರನ್ನು ಪೊಲೀಸರು ತಡೆ ಹಿಡಿದಿದ್ದಾರೆ. ಇದರಿಂದಾಗಿ ರಾಹುಲ್ ಗಾಂಧಿ ಅವರು ಇಂಫಾಲಕ್ಕೆ ಹಿಂದಿರುಗಿದ್ದಾರೆ.


              ಹಿಂಸಾಚಾರದ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮದ ಭಾಗವಾಗಿ ರಾಹುಲ್ ಗಾಂಧಿ ಅವರನ್ನು ತಡೆ ಹಿಡಿಯಲಾಗಿತು ಎಂದು ಪೊಲೀಸರು ತಿಳಿಸಿದ್ದಾರೆ.

                ಬಿಷ್ಣುಪುರ ಬಿಲ್ಲೆಯ ಉಟ್ಲೌ ಗ್ರಾಮದ ಸಮೀಪ ಹೆದ್ದಾರಿಯಲ್ಲಿ ಟೈರ್‌ಗೆ ಬೆಂಕಿ ಹಚ್ಚಲಾಗಿದೆ. ರಾಹುಲ್ ಬೆಂಗಾವಲು ವಾಹನಗಳಿಗೆ ಕಲ್ಲು ಎಸೆಯಲಾಗಿದೆ ಎಂದು ಹೇಳಿದ್ದಾರೆ.

                ಈಶಾನ್ಯ ರಾಜ್ಯದಲ್ಲಿ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವಣ ಹಿಂಸಾಚಾರದಲ್ಲಿ ಈವರೆಗೆ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries