ತಿರುವನಂತಪುರಂ: ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ತಳಮಟ್ಟದಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಹೇಳಿದರು.
ಅವರು ತಿರುವನಂತಪುರಂನಲ್ಲಿ ಮಾಹಿತಿ, ವಿತರಣೆ ಮತ್ತು ಪ್ರಸಾರ ಸಚಿವಾಲಯದ ಘಟಕಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡುತ್ತಿದ್ದರು.
ಆಕಾಶವಾಣಿ, ದೂರದರ್ಶನ, ಪತ್ರಿಕಾ ಮಾಹಿತಿ ಬ್ಯೂರೋ ಮತ್ತು ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ ಸೇರಿದಂತೆ ಸಚಿವಾಲಯದ ಘಟಕಗಳು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಚಟುವಟಿಕೆಗಳನ್ನು ಹೆಚ್ಚಿಸಬೇಕು ಎಂದು ಅವರು ಒತ್ತಿ ಹೇಳಿದರು. ದೂರದರ್ಶನ, ಆಕಾಶವಾಣಿ, ಪಿಐಬಿ, ಸಿಬಿಸಿ ಮೊದಲಾದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.





