ಪೆರ್ಲ: ಅಭಿವೃದ್ಧಿಯ ಹೆಸರಿನಲ್ಲಿ ಮನುಷ್ಯನು ಕಾಡನ್ನು ನಾಶ ಮಾಡುತ್ತಿದ್ದಾನೆ. ಇದರ ಪರಿಣಾಮವಾಗಿ ಜಾಗತಿಕ ತಾಪಮಾನ ಹೆಚ್ಚುತ್ತದೆ. ಆದ್ದರಿಂದ ನಾವು ಗಿಡಗಳನ್ನು ನೆಡಬೇಕು. ಪ್ರಕೃತಿಯನ್ನು ಸಂರಕ್ಷಿಸುವ ಹೊಣೆ ನಮ್ಮದಾಗಬೇಕು ಎಂದು ಎಣ್ಮಕಜೆ ಗ್ರಾಮ ಪಂಚಾಯತ್ ಸದಸ್ಯ ರಾಧಾಕೃಷ್ಣ ನಾಯಕ್ ಜೆ.ಎಸ್. ಹೇಳಿದರು.
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ಎನ್.ಎಸ್. ಎಸ್ ಘಟಕವು ಆಯೋಜಿಸಿದ ಕಾರ್ಯಕ್ರಮವನ್ನು ಮಾವಿನ ಗಿಡ ನೆಟ್ಟು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿ ಪ್ರೇಮ ಕೇವಲ ಒಂದು ದಿನಕ್ಕೆ ಮಾತ್ರ ಮೀಸಲಾಗಬಾರದು. ಶುಚಿತ್ವವನ್ನು ಪಾಲಿಸಬೇಕು. ಪ್ಲಾಸ್ಟಿಕ್ ಮಾಲಿನ್ಯವನ್ನು ಪರಿಹರಿಸುವ ಸಾಧ್ಯತೆಗಳನ್ನು ಶೋಧಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲೆ ವಿಜಯಲಕ್ಷ್ಮಿ ವಿ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿ ಸೋಜ, ಆಶಾ ಕಾರ್ಯಕರ್ತೆ ಸುನೀತ, ಶೇಣಿಯ ಶ್ರೀ ಶಾರದಾಂಬಾ ಪ್ರೌಢಶಾಲೆಯ ಮುಖೋಪಾಧ್ಯಾಯ ಶ್ರೀಶ ಕುಮಾರ್ ಶುಭಹಾರೈಸಿದರು. ಆಂಗ್ಲ ಭಾಷಾ ಶಿಕ್ಷಕ ಶಾಸ್ತ ಕುಮಾರ್ ವಿದ್ಯಾರ್ಥಿಗಳಿಗೆ ಪ್ರತಿಜ್ಞೆಯನ್ನು ಬೋಧಿಸಿದರು.
ವಿದ್ಯಾರ್ಥಿ ಮೊಹಮ್ಮದ್ ಅಲಿ ಶಿಹಾನ್ ನಿರೂಪಿಸಿದರು. ಗಣಿತ ಶಿಕ್ಷಕ ಡಾ. ಅನೀಶ್ ಕುಮಾರ್ ಸ್ವಾಗತಿಸಿ ವಿದ್ಯಾರ್ಥಿ ಅಂಕಿತಾ ವಂದಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಮೆರವಣಿಗೆ ನಡೆಯಿತು.




.jpg)
.jpg)
.jpg)
