ನವದೆಹಲಿ: ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯ ಸ್ಥಾನ ನೀಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದರು.
0
samarasasudhi
ಜೂನ್ 13, 2023
ನವದೆಹಲಿ: ಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯ ಸ್ಥಾನ ನೀಡಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದರು.
ವಿಶ್ವಸಂಸ್ಥೆಯ ಶಾಂತಿಪಾಲನೆ ಕಾರ್ಯಕ್ರಮಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
'ಭಾರತಕ್ಕೆ ಕಾಯಂ ಸದಸ್ಯತ್ವ ನೀಡುವ ಮೂಲಕ ಭದ್ರತಾ ಮಂಡಳಿಯನ್ನು ಹೆಚ್ಚು ಪ್ರಜಾಸತ್ತಾತ್ಮಕ ಹಾಗೂ ಪ್ರಸ್ತುತ ದಿನಮಾನಕ್ಕೆ ತಕ್ಕಂತೆ ಪ್ರಾತಿನಿಧಿಕ ಸಂಸ್ಥೆಯನ್ನಾಗಿ ಮಾಡುವ ಅಗತ್ಯವಿದೆ' ಎಂದು ಅವರು ಪ್ರತಿಪಾದಿಸಿದರು.
'ಭಾರತದ ಜನಸಂಖ್ಯೆ ದೊಡ್ಡಪ್ರಮಾಣದಲ್ಲಿದ್ದರೂ ಭದ್ರತಾ ಮಂಡಳಿಯಲ್ಲಿ ಕಾಯಂ ಸದಸ್ಯತ್ವ ಹೊಂದಿಲ್ಲ. ಇದು ವಿಶ್ವಸಂಸ್ಥೆಯ ಔಚಿತ್ಯವನ್ನೇ ಕುಗ್ಗುವಂತೆ ಮಾಡುತ್ತದೆ' ಎಂದರು.