ನವದೆಹಲಿ: ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಆತನ ಮೇಲೆ ನಡೆಸುವ ಸುಳ್ಳು ಪತ್ತೆ ಪರೀಕ್ಷೆ, ಬ್ರೇನ್ ಮ್ಯಾಪಿಂಗ್ ಸೇರಿದಂತೆ ಮನೋವೈಜ್ಞಾನಿಕ ಪರೀಕ್ಷೆಗಳು ಸಾಕಾಗದಿರಬಹುದು. ಆದರೆ ಅವು ಕೂಡ ಸಾಕ್ಷ್ಯಕ್ಕೆ ಸಂಬಂಧಪಟ್ಟ ವಸ್ತುವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
0
samarasasudhi
ಜೂನ್ 04, 2023
ನವದೆಹಲಿ: ಪ್ರಕರಣವೊಂದರಲ್ಲಿ ವ್ಯಕ್ತಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಲು ಆತನ ಮೇಲೆ ನಡೆಸುವ ಸುಳ್ಳು ಪತ್ತೆ ಪರೀಕ್ಷೆ, ಬ್ರೇನ್ ಮ್ಯಾಪಿಂಗ್ ಸೇರಿದಂತೆ ಮನೋವೈಜ್ಞಾನಿಕ ಪರೀಕ್ಷೆಗಳು ಸಾಕಾಗದಿರಬಹುದು. ಆದರೆ ಅವು ಕೂಡ ಸಾಕ್ಷ್ಯಕ್ಕೆ ಸಂಬಂಧಪಟ್ಟ ವಸ್ತುವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ರಾಜೇಶ್ ಬಿಂದಲ್ ಅವರಿದ್ದ ನ್ಯಾಯಪೀಠ ಈ ಮಾತು ಹೇಳಿದೆ.
ಕೊಲೆ ಪ್ರಕರಣವೊಂದರ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್, ಸುಳ್ಳು ಪತ್ತೆ ಪರೀಕ್ಷೆ, ಬ್ರೇನ್ ಮ್ಯಾಪಿಂಗ್‌ನ ವರದಿಗಳನ್ನು ತಿರಸ್ಕರಿಸಿ, ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಆರೋಪಿಗಳನ್ನು ದೋಷಮುಕ್ತಗೊಳಿಸಿ ಆದೇಶಿಸಿತ್ತು.
ಬಾಂಬೆ ಹೈಕೋರ್ಟ್‌ನ ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಹೈಕೋರ್ಟ್ ಆದೇಶವನ್ನು ರದ್ದುಪಡಿಸಿತು.