ಕುಂಬಳೆ: ಕಳೆದ ಮಾರ್ಚ್ ತಿಂಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಉತ್ತೀರ್ಣರಾದ ಸೂರಂಬೈಲು ಸÀರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು ಬಡ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಸಹೃದಯತೆ ಮೆರೆದಿದ್ದಾರೆ. ಎಲ್ಲಾ ವಿಷಯಗಳಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿದ ಯಶ್ವಿತ್ ಕುಮಾರ್ ನ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಶಾಲಾ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದ್ದಾರೆ. ವಿದ್ಯಾರ್ಥಿಗಳ ಸನ್ಮನಸ್ಸಿಗೆ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




.jpeg)
