HEALTH TIPS

ಒಡಿಶಾ ರೈಲು ದುರಂತ: ತುರ್ತು ಸಭೆ ಕರೆದ ಪ್ರಧಾನಿ ಮೋದಿ

             ನವದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರೈಲು ದುರಂತ ದುರ್ಘಟನೆಯಲ್ಲಿ 238ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಘಟನೆ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತುರ್ತು ಸಭೆ ಕರೆದಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

                ಪರಿಸ್ಥಿತಿಯನ್ನು ಅವಲೋಕಿಸಲು ಪ್ರಧಾನಿ ಮೋದಿಯವರು ತುರ್ತು ಸಭೆಯನ್ನು ಕರೆದಿದ್ದು, ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

                ಅಧಿಕಾರಿಗಳೊಂದಿಗಿನ ತುರ್ತು ಸಭೆ ಬಳಿಕ ಮೋದಿಯವರು ಒಡಿಶಾಗೆ ಭೇಟಿ ನೀಡಲಿದ್ದು, ಅಪಘಾತ ಸಂಭವಿಸಿದ ಸ್ಥಳ ಬಾಲಸೋರ್'ಗೆ ಭೇಟಿ ನೀಡಲಿದ್ದಾರೆ. ನಂತರ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೂ ಭೇಟಿ ನೀಡಲಿದ್ದಾರೆಂದು ಮೂಲಗಳು ತಿಳಿಸಿವೆ.

               ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

               ಈ ನಡುವೆ ಗಾಯಾಳುಗಳ ರಕ್ಷಣಾ ಕಾರ್ಯಾಚರಣೆ, ಚಿಕಿತ್ಸೆಗೆ ನೆರವಾಗಲು ಭಾರತೀಯ ಸೇನಾಪಡೆಗಳನ್ನು ಕೂಡ ಸ್ಥಳದಲ್ಲಿ ನಿಯೋಜನೆಗೊಳಿಸಲಾಗಿದೆ ಎಂದು ತಿಳಿದುಬಂದಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries