HEALTH TIPS

ಕುಳೂರು ಶಾಲೆಯಲ್ಲಿ ಮೀಂಜ ಪಂಚಾಯತಿ ಮಟ್ಟದ ಶಾಲಾ ಪ್ರವೇಶೋತ್ಸವ

             ಮಂಜೇಶ್ವರ : ಕೇರಳದ ಸಾರ್ವಜನಿಕ ಶಿಕ್ಷಣ ಸಂಸ್ಥೆಗಳನ್ನು ಊರಿನ ಹೆಮ್ಮೆಯ ಕೇಂದ್ರಗಳನ್ನಾಗಿಸುವ ದೃಷ್ಟಿಯಿಂದ ಸಾರ್ವಜನಿಕರು ಶಾಲೆಗಳತ್ತ ಗಮನ ಸೆಳೆಯುವಂತೆ ಮಾಡಲು ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಅದರಂತೆ ಶಾಲಾರಂಭದ ದಿನವನ್ನು ಶಾಲಾ ಪ್ರವೇಶೋತ್ಸವ ಎಂಬ ಸಂಭ್ರಮದ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಸಂಬಂಧ ಮೀಂಜ ಪಂಚಾಯತಿ ಮಟ್ಟದ ಶಾಲಾ ಪ್ರವೇಶೋತ್ಸವ ಕುಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದಿಂದ ಜರಗಿತು.

       ಕಾರ್ಯಕ್ರಮದಂಗವಾಗಿ ನವಾಗತ ಮಕ್ಕಳನ್ನು ಚೆಂಡೆ ಮೇಳ, ಗೊಂಬೆ ಕುಣಿತದೊಂದಿಗೆ ಆಕರ್ಷಕ ಮೆರವಣಿಗೆಯ ಮೂಲಕ ಸ್ವಾಗತಿಸಲಾಯಿತು.

     ಕಾರ್ಯಕ್ರಮವನ್ನು ಮೀಂಜ ಪಂಚಾಯತಿ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ ಉದ್ಘಾಟಿಸಿದರು. ಗ್ರಾ.ಪಂ. ಸದಸ್ಯ ಜನಾರ್ಧನ ಪೂಜಾರಿ ಕುಳೂರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತಿ ಸದಸ್ಯೆ ಕಮಲಾಕ್ಷಿ, ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯೆ ಅಶ್ವಿನಿ ಎಂ. ಎಲ್ ಉಪಸ್ಥಿತರಿದ್ದರು. 


           ಈ ವರ್ಷದ ಶಾಲಾ ಅಕಾಡೆಮಿಕ್ ಮಾಸ್ಟರ್ ಪ್ಲಾನ್ 2023-24 ನ್ನು ಮೀಂಜ ಗ್ರಾಮ ಪಂಚಾಯತಿ ವಿದ್ಯಾಭ್ಯಾಸ ಹಾಗೂ ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ ಈ ಸಂದರ್ಭ ಬಿಡುಗಡೆಗೊಳಿಸಿದರು.

         ಕಾರ್ಯಕ್ರಮದಲ್ಲಿ ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ರುಖ್ಯಾ ಸಿದ್ದೀಕ್, ಸದಸ್ಯರಾದ ಮಿಸ್ರಿಯ, ಅಬ್ದುಲ್ ರಜಾಕ್ ಎಂ, ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ನಿವೃತ್ತ ಮುಖ್ಯ ಶಿಕ್ಷಕÀ ಸತ್ಯನಾರಾಯಣ ಶರ್ಮ ಪಿ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಉಪಸ್ಥಿತರಿದ್ದರು.


      ಇದೇ ಸಂದರ್ಭದಲ್ಲಿ ಗ್ರೀನ್ ಕ್ಯಾಂಪಸ್ ಯೋಜನೆಯ ಭಾಗವಾಗಿ ವಿವಿಧ ಕಾರ್ಯಕ್ರಮಗಳಲ್ಲಿ ಆಹಾರಕ್ಕಾಗಿ ಉಪಯೋಗಿಸುತ್ತಿದ್ದ ಪ್ಲಾಸ್ಟಿಕ್ ತಟ್ಟೆ, ಗ್ಲಾಸ್ ಗಳ ಉಪಯೋಗವನ್ನು ತಡೆಯಲು ಶಾಲಾ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಧಾಕರ್ ಶೆಟ್ಟಿ ಎಲಿಯಾಣ ಹಾಗೂ ಶಾಲಾ ಶಿಕ್ಷಕಿ ಅಶ್ವಿನಿ ಸುಧಾಕರ್ ಶೆಟ್ಟಿ ರವರು ತಮ್ಮ ಮಗಳಾದ ಕುಮಾರಿ ಸಾನ್ವಿ ಶೆಟ್ಟಿ ಯ ಹುಟ್ಟಿದ ಹಬ್ಬದ ನೆನಪಿಗಾಗಿ 200 ಸ್ಟೀಲ್ ಪ್ಲೇಟ್ ಹಾಗೂ 200 ಸ್ಟೀಲ್ ಗ್ಲಾಸ್ ಗಳನ್ನು ಕೊಡುಗೆಯಾಗಿ ನೀಡಿದರು. ಜೊತೆಗೆ ಪ್ರೀ ಪ್ರೈಮರಿ ವಿಭಾಗದ ಮಕ್ಕಳಿಗೆ ಆಸನದ ವ್ಯವಸ್ಥೆಯಾಗಿ ಕುರ್ಚಿಗಳನ್ನು ಶಾಲಾ ಶತಮಾನೋತ್ಸವ ಸಮಿತಿಯ ಕೋಶಾಧಿಕಾರಿ ಚಿಕ್ಕಪ್ಪ ಶೆಟ್ಟಿ ಎಲಿಯಾಣ ಕೊಡುಗೆಯಾಗಿ ನೀಡಿದರು.

        ಪ್ರೀ ಪ್ರೈಮರಿ ಹಾಗೂ ಒಂದನೇ ತರಗತಿಯ ಮಕ್ಕಳಿಗೆ ಬ್ಯಾಗ್ ಗಳನ್ನು ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಪ್ರೀ ಪ್ರೈಮರಿ ವಿಭಾಗದ ಮಕ್ಕಳಿಗೆ ಪಾಠ ಪುಸ್ತಕಗಳನ್ನು ಶತಮಾನೋತ್ಸವ ಸಮಿತಿ ಪ್ರಚಾರ ಸಮಿತಿಯ ಅಧ್ಯಕ್ಷ ವಸಂತ ಪೂಜಾರಿ ಕುಳೂರು, ಪ್ರೀ ಪ್ರೈಮರಿ ಮಕ್ಕಳಿಗೆ ಸಮವಸ್ತ್ರವನ್ನು ಮಜಿಬೈಲು ಸಹಕಾರಿ ಬ್ಯಾಂಕ್ ಕೊಡುಗೆಯಾಗಿ ನೀಡಿದರು.

       ಉಳಿದಂತೆ ಮೆರವಣಿಗೆಗೆ ಇನ್ನಷ್ಟು ರಂಗು ತರಲು ಚೆಂಡೆಯ ವ್ಯವಸ್ಥೆಯನ್ನು ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲ, ಗೊಂಬೆ ಕುಣಿತದ ವ್ಯವಸ್ಥೆಯನ್ನು ಶಾಲಾ ಮಾತೆಯರ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ ಕುಳೂರು, ಸದಸ್ಯರಾದ ಮೀನಾಕ್ಷಿ ಬೊಡ್ಡೋಡಿ, ಹೇಮಲತ ಕುಳೂರು, ಸಿಹಿ ತಿಂಡಿಯ ವ್ಯವಸ್ಥೆಯನ್ನು ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಲಘು ಉಪಹಾರದ ವ್ಯವಸ್ಥೆಯನ್ನು ಶಾಲಾ ಶಿಕ್ಷಕ ವೃಂದ ನೀಡಿ ಸಹಕರಿಸಿದರು.


          ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೌಮ್ಯ ಪಿ ಸ್ವಾಗತಿಸಿ, ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ವಂದಿಸಿದರು. ಶಿಕ್ಷಕಿ ನಯನ ಸತೀಶ್ ಕಾರ್ಯಕ್ರಮ ನಿರೂಪಿಸಿದರು.

       ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಪ್ರವೇಶೋತ್ಸವದ ವೀಡಿಯೋ ಪ್ರದರ್ಶನ ಮಾಡಲಾಯಿತು. ಬಳಿಕ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರಗಿದವು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries