ಕಾಸರಗೋಡು: ಶಾಲಾ ವಿದ್ಯಾರ್ಥಿನಿಯರನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾ ಪಲ್ಟಿ ಹೊಡೆದು ಅಪಘಾತ ಸಂಭವಿಸಿದೆ. ಚಾಲಕ ಹಾಗೂ ಹತ್ತು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಕೇಂದ್ರೀಯ ವಿದ್ಯಾಲಯದ ಮಕ್ಕಳು ಪ್ರಯಾಣಿಸುತ್ತಿದ್ದ ಆಟೋದಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಮುವಾಟ್ಟುಪುಳದಲ್ಲಿ ರಸ್ತೆ ದಾಟುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿ ಮೃತಪಟ್ಟಿದ್ದರು. ಮುವಾಟ್ಟುಪುಳ ನಿರ್ಮಲಾ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿನಿ ನಮಿತಾ ಮೃತರು. ಘಟನೆಯಲ್ಲಿ ಸಹಪಾಠಿಗಳು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ಬೈಕ್‍ನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.





