HEALTH TIPS

ಸಹಮತದ ಸೆಕ್ಸ್ ವಯೋಮಿತಿ 18 ರಿಂದ 16ಕ್ಕೆ ಇಳಿಸಿ: ಕೇಂದ್ರ ಸರ್ಕಾರಕ್ಕೆ ಮಧ್ಯಪ್ರದೇಶ ಹೈಕೋರ್ಟ್ ಒತ್ತಾಯ

             ಗ್ವಾಲಿಯರ್: ಸಹಮತದ ಸೆಕ್ಸ್ ವಯೋಮಿತಿ 18ರಿಂದ 16ಕ್ಕೆ ಇಳಿಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠವು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

                  2020ರ ಜುಲೈ 17ರಂದು ವರದಿಯಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಚಂದೇಲ್ ಜಾದವ್ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ದೀಪಕ್ ಕುಮಾರ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಈ ಸಲಹೆ ನೀಡಿದ್ದು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಜಾಗೃತಿ ಮತ್ತು ಸುಲಭವಾಗಿ ಪ್ರವೇಶಿಸಬಹುದಾದ ಇಂಟರ್ನೆಟ್ ಸಂಪರ್ಕದಿಂದಾಗಿ 14 ವರ್ಷ ವಯಸ್ಸಿನ ಪ್ರತಿಯೊಬ್ಬ ಹುಡುಗ ಅಥವಾ ಹುಡುಗಿ ಚಿಕ್ಕ ವಯಸ್ಸಿನಲ್ಲಿಯೇ ಲೈಂಗಿಕತೆಯ ಕುರಿತಾದ ಅರಿವು ಹೆಚ್ಚಾಗುತ್ತಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

                ಪ್ರೌಢಾವಸ್ಥೆಯಲ್ಲಿ ಹುಡುಗರು ಮತ್ತು ಹುಡುಗಿಯರು ಪರಸ್ಪರ ಆಕರ್ಷಿತರಾಗುತ್ತಾರೆ. ಇದರಿಂದ ಸಹಮತದ ದೈಹಿಕ ಸಂಬಂಧಗಳು ಉಂಟಾಗುತ್ತವೆ. ಒಂದು ವೇಳೆ ಚಿಕ್ಕ ವಯಸ್ಸಿನಲ್ಲಿ ಸಹಮತದ ಸೆಕ್ಸ್ ನಡೆದು ಪ್ರಕರಣ ದಾಖಲಾದರೇ ಅದು ಪೋಕ್ಸೊ ಅಡಿ ಬರುತ್ತದೆ.

               ಹೆಣ್ಣು ಮಕ್ಕಳ ಸಮ್ಮತಿ ಸೆಕ್ಸ್ ವಯೋಮಿತಿಯನ್ನು 18 ವರ್ಷಕ್ಕೆ ಏರಿಸಿರುವುದು ಸಮಾಜದ ರಚನೆಗೆ ಕುಂದುಂಟು ಮಾಡುತ್ತಿದೆ ಎಂದು ನ್ಯಾಯಾಲಯ ಹೇಳಿದೆ. 

                  ಹದಿಹರೆಯದ ವಯಸ್ಸಿನಲ್ಲೇ ಯುವ ಜನತೆ ದೈಹಿಕ ಸಂಬಂಧಗಳನ್ನು ಬೆಳೆಸುತ್ತಾರೆ. ಆದರೆ, ಇದರಿಂದಾಗಿ ಸಮಾಜದಲ್ಲಿ ಹುಡುಗನನ್ನು ಅಪರಾಧಿಯಂತೆ ನೋಡಲಾಗುತ್ತದೆ. ಇಂದು, ಹೆಚ್ಚಿನ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಕಾನೂನು ವೈಪರೀತ್ಯದಿಂದ ಹದಿಹರೆಯದ ಹುಡುಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಮೊದಲಿನಂತೆಯೇ ಸಮ್ಮತಿಯ ವಯಸ್ಸನ್ನು 18 ರಿಂದ 16 ವರ್ಷಕ್ಕೆ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕೆಂದು ನಾನು ವಿನಂತಿಸುತ್ತೇನೆ. ಅನ್ಯಾಯವನ್ನು ಸರಿಪಡಿಸಲು ತಿದ್ದುಪಡಿಗಳನ್ನು ಮಾಡಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries