ಲಡಾಖ್: 24ನೇ ಕಾರ್ಗಿಲ್ ವಿಜಯ ದಿವಸದ ಆಚರಣೆಗಾಗಿ ಲಡಾಖ್ನ ದ್ರಾಸ್ನಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ಧೈರ್ಯ ಹಾಗೂ ತ್ಯಾಗವನ್ನು ಸ್ಮರಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.
0
samarasasudhi
ಜುಲೈ 26, 2023
ಲಡಾಖ್: 24ನೇ ಕಾರ್ಗಿಲ್ ವಿಜಯ ದಿವಸದ ಆಚರಣೆಗಾಗಿ ಲಡಾಖ್ನ ದ್ರಾಸ್ನಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. 1999ರಲ್ಲಿ ನಡೆದ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಯೋಧರ ಧೈರ್ಯ ಹಾಗೂ ತ್ಯಾಗವನ್ನು ಸ್ಮರಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.
ಕಾರ್ಯಕ್ರಮದ ಅತಿಥಿಯಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಲ್ಗೊಳ್ಳಲಿದ್ದು, ಹುತಾತ್ಮಯೋಧರಿಗೆ ಗೌರವ ಸಲ್ಲಿಸಲಿದ್ದಾರೆ. ಆಚರಣೆಯ ಭಾಗವಾಗಿ ಇಂದು ಲಮೊಚೆನ್ ವ್ಯೂ ಪಾಯಿಂಟ್ನಲ್ಲಿ ಧ್ವನಿ ಹಾಗೂ ದೃಶ್ಯಗಳ ಮೂಲಕ ಕಾರ್ಗಿಲ್ ಯುದ್ಧದ ತುಣುಕುಗಳನ್ನು ಪ್ರದರ್ಶಿಸಲಾಗುವುದು. ವಿಜಯ್ ಭೋಜ್ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದ್ದು, ಸೇನಾ ಬ್ಯಾಂಡ್ ರಾಷ್ಟ್ರ ಗೀತೆಯನ್ನು ಪ್ರಸ್ತುತ ಪಡಿಸಲಿದೆ.
ಪ್ರತಿವರ್ಷ ಜುಲೈ 26ರಂದು ಕಾರ್ಗಿಲ್ ಯುದ್ಧದಲ್ಲಿ ತಾಯ್ನಾಡಿಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿ ಹುತಾತ್ಮರಾದ ಭಾರತೀಯ ವೀರ ಸೈನಿಕರನ್ನು ಹೆಮ್ಮೆಯಿಂದ ಸ್ಮರಿಸುವ ಹಿನ್ನೆಲೆಯಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಗುತ್ತದೆ.