ಕಾಸರಗೋಡು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆ ವತಿಯಿಂದ ವಲಿಯಪಾರಾದಲ್ಲಿ ನಿರ್ಮಿಸಲಿರುವ ಸಾವಿತ್ರಿಭಾಯಿ ಫುಲೆ ಸ್ಮಾರಕ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ-ಹಿಂದುಳಿದ ವರ್ಗಗಳ ಕಲ್ಯಾಣ, ದೇವಸ್ವಂ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕೆ.ರಾಧಾಕೃಷ್ಣನ್ ಜುಲೈ 31 ರಂದು ಸಂಜೆ 3ಕ್ಕೆ ಶಿಲಾನ್ಯಾಸ ನಡೆಸುವರು. ಶಾಸಕ ಸಿ.ಎಚ್.ಕುಂಜಾಂಬು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ ಡಿ.ಆರ್.ಮೇಘಶ್ರೀ, ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್, ತ್ರಿಸ್ತರ ಪಂಚಾಯಿತಿ ಜನಪ್ರತಿನಿಧಿಗಳು,ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸುವರು. ವಲಿಯಪಾರದಲ್ಲಿ ಮಂಜೂರಾದ ಹತ್ತು ಎಕರೆ ಜಾಗದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. 2017ರಿಂದ ವಸತಿ ಶಾಲೆಯು ಕುಂಡಂಗುಳಿಯ ಬೇಡಡ್ಕ ಮೆಟ್ರಿಕ್ ಪೂರ್ವ ಹಾಸ್ಟೆಲ್ಗೆ ಮಂಜೂರಾದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.

