ಕಾಸರಗೋಡು: ಸಂಪೂರ್ಣ ಡಿಜಿಟಲ್ ಸಾಕ್ಷರತೆಯ ಜಿಲ್ಲಾಮಟ್ಟದ ಪ್ರವೇಶೋತ್ಸವ ಜುಲೈ 31ರಂದು ಬೆಳಗ್ಗೆ 9.30ಕ್ಕೆ ವಿದ್ಯಾನಗರ ಆಸಾಪ್ ಸಭಾಂಗಣದಲ್ಲಿ ನಡೆಯಲಿದ್ದು, ಸ್ಥಳೀಯಾಡಳಿತ ಖಾತೆ ಸಚಿವ ಎಂ.ಬಿ ರಆಜೇಶ್ ಉದ್ಘಾಟಿಸುವರು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ 30 ರಿಂದ 60 ವರ್ಷದೊಳಗಿನ ಸ್ಮಾರ್ಟ್ ಫೆÇೀನ್ ಬಳಕೆದಾರರನ್ನು ಡಿಜಿಟಲ್ ಸಾಕ್ಷರರನ್ನಾಗಿ ಮಾಡುವುದು ಯೋಜನೆಯ ಉದ್ದೇಶವಾಗಿದೆ. ಭಾರತದಲ್ಲಿ ಪ್ರಥಮ ಬಾರಿಗೆ ಜಿಲ್ಲಾ ಪಂಚಾಯಿತಿ ಸಂಪೂರ್ಣ ಡಿಜಿಟಲ್ ಸಾಕ್ಷರತಾ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಜಿಲ್ಲಾ ಪಂಚಾಯಿತಿ, ನಗರಸಭೆ ಮತ್ತು ಗ್ರಾಮ ಪಂಚಾಯಿತಿಗಳ ಜಂಟಿ ಸಹಭಾಗಿತ್ವದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಜಿಲ್ಲಾ ಸಾಕ್ಷರತಾ ಮಿಷನ್, 'ಕೈಟ್'ಮತ್ತು ಲೈಬ್ರರಿ ಕೌನ್ಸಿಲ್ ನೇತೃತ್ವದಲ್ಲಿ ಯೋಜನೆ ಜಾರಿಗೊಳ್ಳಲಿದೆ. ಬುಲ್ಲೆಟ್ ಮೂಲಕ ಹಿಮಾಲಯಕ್ಕೆ ಸಾಃಸ ಯಾತ್ರೆ ಕೈಗೊಂಡಿರುವ ಪಿ.ಎನ್ ಸೌಮ್ಯಾ ಯೋಜನೆಯ ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ.
ತಲಾ ಎರಡು ಗಂಟೆಯಂತೆ ಸತತ ಐದು ದಿವಸಗಳಲ್ಲಾಗಿ ಹತ್ತು ಗಂಟೆಗಳ ತರಗತಿಗಳನ್ನು ನೀಡಲಾಗುತ್ತದೆ. ಎಲ್ಲಾ ಕಲಿಕೆದಾರರಿಗೆ ಕೈಪಿಡಿಯನ್ನು ನೀಡಲಾಗುವುದು. ಆಯಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಸದಸ್ಯರು ಕಲಿಕೆದಾರರನ್ನು ಆಯ್ಕೆಗೊಳಿಸಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಶಾನವಾಸ್ ಪಾದೂರು, ಕಾರ್ಯದರ್ಶಿ ಪಿ.ಕೆ.ಸಜೀವ್, ಜಿಲ್ಲಾ ಮಾಹಿತಿ ಅಧಿಕಾರಿ ಎಂ.ಮಧುಸೂದನನ್, ಜಿಲ್ಲಾ ಸಾಕ್ಷರತಾ ಮಿಷನ್ ಸಂಯೋಜಕ ಪಿ.ಎನ್.ಬಾಬು, ಕೈಟ್ ಜಿಲ್ಲಾ ಸಂಯೋಜಕ ಕೆ.ಶಂಕರನ್ ಮಾಸ್ಟರ್, ಜಿಲ್ಲಾ ಸಾಕ್ಷರತಾ ಸಮಿತಿ ಸದಸ್ಯ ಪಪ್ಪನ್ ಕುಟ್ಟಮತ್, ಎಸ್ಎಸ್ಎ ಮಾಜಿ ಜಿಲ್ಲಾ ಸಂಯೋಜಕ ಪಿ.ರವೀಂದ್ರನ್ ಮಾಸ್ಟರ್ ಉಪಸ್ಥಿತರಿದ್ದರು.

