HEALTH TIPS

ಚಂದ್ರಯಾನ-3ಗೆ ಕ್ಷಣಗಣನೆ: ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಇಸ್ರೊ ವಿಜ್ಞಾನಿಗಳ ತಂಡ

                ತಿರುಪತಿ : ಚಂದ್ರಯಾನ -3 ಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ)ಯ ವಿಜ್ಞಾನಿಗಳ ತಂಡ ತಿರುಮಲದ ವೆಂಕಟೇಶ್ವರ ದೇವಾಲಯಕ್ಕೆ ಗುರುವಾರ ಬೆಳಿಗ್ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದೆ.

                   ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷ ಅಧಿಕಾರಿಗಳಿದ್ದ ತಂಡ ತಿರುಮಲ ತಿರುಪತಿ ದೇವಾಲಯಕ್ಕೆ ಭೇಟಿ ನೀಡಿದ ವಿಡಿಯೊ ಹರಿದಾಡಿದ್ದು, ವಿಜ್ಞಾನಿಗಳ ಭೇಟಿಯ ಬಗ್ಗೆ ಟಿಟಿಡಿ ದೃಢಪಡಿಸಿದೆ.


                   ಇಸ್ರೊ ತಂಡ ತಿರುಮಲಕ್ಕೆ ಭೇಟಿ ನೀಡಿದೆ. ಆದರೆ ನಮ್ಮ ಪ್ರಚಾರ ವಿಭಾಗ ಅದನ್ನು ವರದಿ ಮಾಡಿಲ್ಲ. ಇಸ್ರೊ ಅಧಿಕಾರಿಗಳು ಸಾಮಾನ್ಯವಾಗಿ ದೇವಸ್ಥಾನಕ್ಕೆ ಭೇಟಿ ನೀಡುವುದು ಕಡಿಮೆ' ಎಂದು ಟಿಟಿಡಿ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

                   ನಾಳೆ (ಶುಕ್ರವಾರ) ಚಂದ್ರಯಾನ -3 ಮಧ್ಯಾಹ್ನ 2.35ಕ್ಕೆ ಉಡಾವಣೆಗೊಳ್ಳಲಿದೆ. ಲ್ಯಾಂಡರ್ ಮತ್ತು ರೋವರ್ ಅನ್ನು ಹೊತ್ತ ಬಾಹ್ಯಾಕಾಶ ನೌಕೆಯು ಆ. 23ರ ಸುಮಾರಿಗೆ ಚಂದ್ರನ ಕಕ್ಷೆಯನ್ನು ತಲುಪಲಿದೆ. ನಂತರದ15 ದಿನಗಳಲ್ಲಿ ನೌಕೆ ಚಂದ್ರನ ಮೇಲೆ ಇಳಿಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries