ತಿರುವನಂತಪುರ: ಕೇರಳದ ಕೆಲ ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಕೆಲವು ತಗ್ಗುಪ್ರದೇಶಗಳು ಜಲಾವೃತವಾಗಿವೆ.
ಕೇರಳದಲ್ಲಿ ಭಾರಿ ಮಳೆಗೆ 8 ಸಾವು; 4 ಜಿಲ್ಲೆಗಳಿಗೆ 'ಯಲ್ಲೊ ಅಲರ್ಟ್'
0
ಜುಲೈ 09, 2023
Tags
0
samarasasudhi
ಜುಲೈ 09, 2023
ತಿರುವನಂತಪುರ: ಕೇರಳದ ಕೆಲ ಭಾಗಗಳಲ್ಲಿ ಶನಿವಾರ ಭಾರಿ ಮಳೆಯಾಗಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿತ್ತು. ಕೆಲವು ತಗ್ಗುಪ್ರದೇಶಗಳು ಜಲಾವೃತವಾಗಿವೆ.
ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಕೇರಳದಲ್ಲಿ ಮಳೆಯಿಂದಾಗಿ ಇದುವರೆಗೆ 8 ಜನರು ಮೃತಪಟ್ಟಿದ್ದು, 7,800 ಜನರನ್ನು ಸ್ಥಳಾಂತರಿಸಲಾಗಿದೆ.
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿದ್ದ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದರೆ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ಯಲ್ಲೊ ಅಲರ್ಟ್ ಘೋಷಿಸಿದೆ.
ಕೊಚ್ಚಿ, ಇಡುಕ್ಕಿ ಪ್ರದೇಶಗಳಲ್ಲಿ ಶನಿವಾರ ನಿರಂತರ ಮಳೆಯಾಗಿದೆ. ಕೋಯಿಕ್ಕೋಡ್ ಮತ್ತು ಕಣ್ಣೂರು ಮತ್ತು ತಲಶ್ಶೇರಿ ಮಾರ್ಗದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮರಗಳು ಉರುಳಿಬಿದ್ದ ಪರಿಣಾಮ ವಾಹನಗಳ ಸಂಚಾರಕ್ಕೆ ಕೆಲಕಾಲ ತೊಂದರೆಯಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಮಾರ್ಗವನ್ನು ತೆರವುಗೊಳಿಸಿದ ಬಳಿಕ ಸಂಚಾರ ದಟ್ಟಣೆ ಕಡಿಮೆಯಾಯಿತು. ಪತ್ತನಂತಿಟ್ಟ ಮತ್ತು ತಿರುವಲ್ಲಾ ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.