HEALTH TIPS

ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಸಭೆ ನಾಳೆಯಿಂದ: ಔತಣಕ್ಕೆ ಮಮತಾ ಗೈರು, ಸಭೆಗೆ ಹಾಜರು

              ವದೆಹಲಿ: ಬೆಂಗಳೂರಿನಲ್ಲಿ ಇದೇ 17ರಂದು ವಿರೋಧ ಪಕ್ಷಗಳು ಆಯೋಜಿಸಿರುವ ಔತಣಕೂಟಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಲಿದ್ದು, 18ರಂದು ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಟಿಎಂಸಿ ಮೂಲಗಳು ಶನಿವಾರ ತಿಳಿಸಿವೆ.

              ಜೂನ್‌ 27ರಂದು ಸೆವೊಕ್ ವಾಯುನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡುವಾಗ ಮಮತಾ ಗಾಯಗೊಂಡಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

                  ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಔತಣ ಆಯೋಜಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ಸಂದರ್ಭ ನಡೆದ ಹಿಂಸಾಚಾರ, ಸಂಘರ್ಷದ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್‌, ಎಡಪಕ್ಷಗಳು, ಟಿಎಂಸಿಯ ವರಿಷ್ಠರು ಪರಸ್ಪರ ಮುಖಾಮುಖಿಯಾಗಲಿದ್ದಾರೆ.

                  ಕಾಂಗ್ರೆಸ್‌ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ 18ರಂದು ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆಮ್‌ಆದ್ಮಿ ಪಕ್ಷವೂ ಸೇರಿದಂತೆ 24 ಪಕ್ಷಗಳಿಗೆ ಸಭೆಯಲ್ಲಿ ಭಾಗಿಯಾಗುವಂತೆ ಆಹ್ವಾನ ನೀಡಲಾಗಿದೆ.

                    ಪಟ್ನಾದಲ್ಲಿ ನಡೆದ ಮೊದಲ ಸಭೆಯಲ್ಲಿ 15 ಪಕ್ಷಗಳು ಭಾಗವಹಿಸಿದ್ದವು. ಈ ಸಭೆಯ ನಂತರ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಇಬ್ಭಾಗವಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries