HEALTH TIPS

ಮಣಿಪುರ ಉದ್ರಿಕ್ತರು-ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ: ಇಬ್ಬರು ಸಿಬ್ಬಂದಿಗೆ ಗಾಯ

                ಇಂಫಾಲ: ಹಿಂಸಾಚಾರ ಪೀಡಿತ ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.

                 ರಾಜಧಾನಿ ಇಂಫಾಲದಿಂದ 50 ಕಿ.ಮೀ ದೂರದಲ್ಲಿ ಘಟನೆ ನಡೆದಿದೆ. ಗುರುವಾರ ಬೆಳಿಗ್ಗೆ ಆರಂಭವಾದ ಗುಂಡಿನ ದಾಳಿ ಶುಕ್ರವಾರ ಬೆಳಗಿನ ಜಾವದವರೆಗೂ ಮುಂದುವರೆದಿತ್ತು.

                ಘಟನೆಯಲ್ಲಿ ಜನರಿಲ್ಲದೆ ಖಾಲಿ ಇದ್ದ ಮನೆಯೊಂದಕ್ಕೆ ಬೆಂಕಿ ಬಿದ್ದಿದ್ದು ಸಂಪೂರ್ಣವಾಗಿ ಸುಟ್ಟುಹೋಗಿದೆ.

                     ಘಟನೆ ನಡೆದ ಸುತ್ತಲಿನ ಪ್ರದೇಶಗಳಲ್ಲಿ ಡ್ರೋನ್‌ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ದುಷ್ಕರ್ಮಿಗಳು ಗಾಯಗೊಂಡಿದ್ದಾರೆಯೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿಯಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

                  ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಮೈತೇಯಿ ಮತ್ತು ಕುಕಿ ಸಮುದಾಯದ ನಡುವಿನ ಸಂಘರ್ಷ ಹಲವು ಅಹಿತಕರ ಘಟನೆಗಳಿಗೂ ಕಾರಣವಾಗಿದ್ದು, ಈವರೆಗೆ 160ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries