HEALTH TIPS

ಮಣಿಪುರ ಅಪರಾಧ ಕೃತ್ಯ: ಸಿಬಿಐ ತನಿಖೆ ಆರಂಭ, ಇದುವರೆಗೆ ಯಾರನ್ನೂ ಬಂಧಿಸಿಲ್ಲ

               ವದೆಹಲಿ: ಮಣಿಪುರದಲ್ಲಿ ನಡೆದಿರುವ ಆರು ವಿವಿಧ ಅಪರಾಧ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ಸಿಬಿಐ, ಈ ಸಂಬಂಧ ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

                ಆರು ಕೃತ್ಯಗಳಿಗೆ ಸಂಬಂಧಿಸಿ ಕೇಂದ್ರ ತನಿಖಾ ಸಂಸ್ಥೆಯು ಮಣಿಪುರದ ಪೊಲೀಸರಿಂದ ಎಫ್‌ಐಆರ್ ಪಡೆದುಕೊಂಡಿದೆ.

                ಈ ಸಂಬಂಧ ಪುನಃ ಮೊಕದ್ದಮೆ ದಾಖಲಿಸಿದ ತಿಂಗಳ ನಂತರವೂ ಪ್ರಕರಣದ ಸೂಕ್ಷ್ಮತೆ ಹಿನ್ನೆಲೆಯಲ್ಲಿ ಎಫ್‌ಐಆರ್‌ ಅನ್ನು ಸಿಬಿಐ ಬಹಿರಂಗಪಡಿಸಿಲ್ಲ ಎಂದು ತಿಳಿಸಿದ್ದಾರೆ.

              ಕೇಂದ್ರ ಸರ್ಕಾರ ಉಲ್ಲೇಖಿಸಿರುವ ಆರು ಪ್ರಕರಣಗಳ ತನಿಖೆಗಾಗಿ ಡಿಐಜಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಸಿಬಿಐ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಕಠಿಣ ಪರಿಸ್ಥಿತಿಯಲ್ಲಿ ತಂಡವು ತನಿಖೆಯನ್ನು ಕೈಗೊಂಡಿದೆ. ಪ್ರತಿಭಟನನಿರತ ಗುಂಪುಗಳ ಪ್ರತಿರೋಧ, ಅಡ್ಡಿ ಎದುರಾಗುತ್ತಿದೆ. ಸಾಕ್ಷಿಗಳನ್ನು ಗುರುತಿಸುವುದು ಕಷ್ಟವಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries