HEALTH TIPS

ಸುಪ್ರೀಂ ಕೋರ್ಟ್‌ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕ

              ವದೆಹಲಿ: ತೆಲಂಗಾಣ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ಕೇರಳ ಹೈಕೋರ್ಟ್‌ನ ಮುಖ್ಯನ್ಯಾಯಮೂರ್ತಿ ವೆಂಕಟನಾರಾಯಣ ಭಟ್ಟಿ ಅವರನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ಕೇಂದ್ರ ಸರ್ಕಾರ ಬುಧವಾರ ನೇಮಕ ಮಾಡಿದೆ.

                ಜುಲೈ 5 ರಂದು ಕೊಲಿಜಿಯಂ ಮಾಡಿದ್ದ ಶಿಫಾರಿಸಿನ ಆಧಾರದ ಮೇಲೆ ಕೇಂದ್ರ ಸರ್ಕಾರ ಈ ಇಬ್ಬರ ನೇಮಕವನ್ನು ಅಂತಿಮಗೊಳಿಸಿದೆ.

                ಭುಯಾನ್ ಅವರು ಆಂಧ್ರಪ್ರದೇಶದವರು. 2011ರಲ್ಲಿ ಗುವಾಹಟಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ವೆಂಕಟನಾರಾಯಣ ಭಟ್ಟಿ ಅವರು 2013ರಲ್ಲಿ ಆಂಧ್ರ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ನೇಮಕವಾಗಿದ್ದರು. ಈ ಇಬ್ಬರ ನೇಮಕದೊಂದಿಗೆ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ‌


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries