ಕಾಸರಗೋಡು : ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 6ರಿಂದ ರಾಣಿಪುರಂ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಮುಚ್ಚಲಾಗಿದೆ. ಜುಲೈ 6ರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವುದರಿಂದ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.ಮುಂದಿನ ಸೂಚನೆ ಬರುವವರೆಗೂ ಪ್ರಸಿದ್ಧ ಪ್ರವಾಸಿತಾಣವಾಗಿರುವ ರಾಣಿಪುರಕ್ಕೆ ಪ್ರವಾಸಿಗರಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಡಿಎಫ್‍ಒ ಕೆ.ಅಶ್ರಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಳೆದ ರಜಾದಿನಗಳಲ್ಲಿ ಅನೇಕ ಪ್ರವಾಸಿಗರು ರಾಣಿಪುರಂಗೆ ಭೇಟಿ ನೀಡಿದ್ದು. ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಚಾರಣಿಗರನ್ನು ಪನತ್ತಡಿಯಿಂದ ವಾಪಸ್ ಕಳುಹಿಸಲಾಗುತ್ತಿದೆ.

.jpg)
